ಬ್ಯಾಡಗಿ: ತಾಲ್ಲೂಕಿನ ಕಾಗಿನೆಲೆ ಮತ್ತು ಕುಮ್ಮೂರು ಗ್ರಾಮಗಳಿಗೆ ಬುಧವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರುಚಿ ಬಿಂದಾಲ್ ಅನಿರೀಕ್ಷಿತ ಭೇಟಿ ನೀಡಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು.
ನರೇಗಾ, ಜಲಜೀವನ ಮಿಷನ್‌ಗೆ ಸಂಬಂಧಿಸಿದ ಕಡತಗಳನ್ನು ಪರಿಶೀಲಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಮಾಹಿತಿ ಪಡೆದರು. ಅಲ್ಲಿ ನರೇಗಾ ಯೋಜನೆಯಡಿ ನಿರ್ಮಾಣವಾಗುತ್ತಿರುವ ಉದ್ಯಾನದ ಕಾಮಗಾರಿ ಪರಿಶೀಲಿಸಿದರು.
ಬಳಿಕ ಕುಮ್ಮೂರು ಗ್ರಾಮದಲ್ಲಿ ನಡೆಯುತ್ತಿರುವ ನರೇಗಾ ಕಾಮಗಾರಿ, ಸರ್ಕಾರಿ ಪ್ರೌಢಶಾಲೆಯ ಭೋಜನಾಲಯ, ಆಟದ ಮೈದಾನ, ಕೆರೆ ನಿರ್ಮಾಣ ಕಾಮಗಾರಿ, ಸಂಜೀವಿನಿ ಶೆಡ್ ಮುಂತಾದವುಗಳನ್ನು ಪರಿಶೀಲಿಸಿದರು. ಬಳಿಕ ನೆಲ್ಲಿಕೊಪ್ಪ ಗ್ರಾಮಕ್ಕೆ ತೆರಳಿದರು. ಅಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜೊತೆಗೆ ಸಂವಾದ ನಡೆಸಿದರು.
ಸಹಾಯಕ ನಿರ್ದೇಶಕ ಪರುಶುರಾಮ ಅಗಸನಹಳ್ಳಿ, ಎಡಿಪಿಸಿ ಮಹಾಂತೇಶ ನರೇಗಲ್, ತಾಂತ್ರಿಕ ಸಂಯೋಜಕ ಸಂತೋಷ ನಾಯ್ಕ, ಐಇಸಿ ಸಂಯೋಜಕ ಸಿ.ಜಿ.ಅಕ್ಷಯ ಹಾಗೂ ಅಭಿವೃದ್ಧಿ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.