ADVERTISEMENT

ಕಳ್ಳತನ ಪ್ರಕರಣ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 22 ಮೇ 2020, 14:00 IST
Last Updated 22 ಮೇ 2020, 14:00 IST
ಹಾವೇರಿ ನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ, ಟಿ.ವಿ ಮತ್ತು ಮೊಬೈಲ್‌ಗಳನ್ನು ನಗರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ
ಹಾವೇರಿ ನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ, ಟಿ.ವಿ ಮತ್ತು ಮೊಬೈಲ್‌ಗಳನ್ನು ನಗರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ   

ಹಾವೇರಿ: ಜಿಲ್ಲೆಯಲ್ಲಿ ಈಚೆಗೆ ನಡೆದ ಎರಡು ಕಳ್ಳತನ ಪ್ರಕರಣಗಳಿಗೆ ಸಂಬಂಧಪಟ್ಟಂತೆ, ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ ₹5.18 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿವೈಎಸ್ಪಿ ಸಂತೋಷ ವಿಜಯಕುಮಾರ ತಿಳಿಸಿದರು.

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲ್ಲೂಕಿನ ವ್ಯಾಪಾರಿಗಳಾದ ಚಿತ್ರಗಿ ಪ್ಲಾಟ್‌ ಭದ್ರಾಪುರ ಗ್ರಾಮದ ಉಮರ್‌ ಫಾರೂಕ್‌ ಮತ್ತು ಪಾಳಾ ಗ್ರಾಮದ ಮಹಮದ್‌ ಜಾಫರ್‌ ಖಾನ್‌ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಹಾವೇರಿ ನಗರದಲ್ಲಿ ಜನವರಿ 29ರಂದು ಶ್ರೀಕಂಠೇಶ್ವರ ಗೃಹೋಪಯೋಗಿ ಮಳಿಗೆಯ ಕಿಟಕಿ ಮುರಿದು ಒಟ್ಟು ₹4.59 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳನ್ನು ಮತ್ತು ನಗದನ್ನು ಕಳ್ಳತನ ಮಾಡಿದ್ದರು. ಈ ಸಂಬಂಧ ಪ್ರಕರಣ ದಾಖಲಾಗಿತ್ತು ಎಂದು ತಿಳಿಸಿದರು.

ADVERTISEMENT

ಆರೋಪಿಗಳಿಂದ ಎರಡು ಟಿ.ವಿ., 8 ಮೊಬೈಲ್‌ ಫೋನ್‌, 1 ಮೈಕ್ರೋವೇವ್‌ ಮತ್ತು ಇತರೆ ಗೃಹೋಪಯೋಗಿ ಸಾಮಾನುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಹಾನಗಲ್‌ ನಗರದಲ್ಲಿ ಕಳ್ಳತನ ಮಾಡಿದ್ದ ಬೈಕ್‌ ಅನ್ನೂ ಜಪ್ತಿ ಮಾಡಲಾಗಿದೆ. ಇನ್ನೂ ಎರಡು ಟಿ.ವಿ, 5 ಮೊಬೈಲ್‌ ಫೋನ್‌ಗಳನ್ನು ಜಪ್ತಿ ಮಾಡುವ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಹೇಳಿದರು.

ಸಿಪಿಐ ಪ್ರಭಾವತಿ ಸಿ.ಶೇತಸನದಿ, ಎಸ್‌ಐ ಪಿ.ಜಿ.ನಂದಿ, ಪ್ರೊಬೇಷನರಿ ಎಸ್‌ಐ ಚಂದನ್‌, ಎಎಸ್‌ಐ ಎಸ್‌.ಡಿ. ಸಾಗರ ಮತ್ತು ಸಿಬ್ಬಂದಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.