ತಿಳವಳ್ಳಿ: ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈಚೆಗೆ ನೇತ್ರ ಉಚಿತ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ಜರುಗಿತು.
ಹುಬ್ಬಳ್ಳಿಯ ಎಂ.ಎಂ. ಜೋಶಿ ಕಣ್ಣಿನ ಆಸ್ಪತ್ರೆ ಹಾಗೂ ಟೀಂ ಆಪತ್ಬಾಂಧವ ಆಶ್ರಯದಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ 155 ಜನರ ನೇತ್ರ ತಪಾಸಣೆ ಮಾಡಲಾಯಿತು. 55 ಜನರನ್ನು ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ‘ಗ್ರಾಮೀಣ ಪ್ರದೇಶದ ಬಡ ಮತ್ತು ಮಧ್ಯಮ ವರ್ಗಗಳ ಜನತೆ ನಗರ ಪ್ರದೇಶಗಳಿಗೆ ಹೋಗಿ, ಹೆಚ್ಚಿನ ಹಣ ವ್ಯಯಿಸಿ ನೇತ್ರ ತಪಾಸಣೆ ಮಾಡಸಬೇಕಿದೆ. ಅಂಥವರಿಗೆ ಸ್ಥಳೀಯವಾಗಿ ಹಮ್ಮಿಕೊಳ್ಳುವ ನೇತ್ರ ಉಚಿತ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರಗಳು ಅನುಕೂಲಕರವಾಗಿವೆ’ ಎಂದರು.
ಎಂ.ಎಂ. ಜೋಶಿ ಕಣ್ಣಿನ ಆಸ್ಪತ್ರೆಯ ಮಂಜುಳಾ, ಜಾಫರ್ ಬಡ್ನಿ, ರಾಮಚಂದ್ರ ಕಲ್ಲೇರ, ಅಬ್ದುಲ್ ಖಾದರ ಮೂಗೂರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.