ADVERTISEMENT

ನೀರು ತುಂಬಿದ್ದ ಬಕೆಟ್‌ನಲ್ಲಿ ಬಿದ್ದು 14 ತಿಂಗಳ ಮಗು ಸಾವು: ಹಾವೇರಿಯಲ್ಲಿ ಘಟನೆ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2025, 5:59 IST
Last Updated 24 ಅಕ್ಟೋಬರ್ 2025, 5:59 IST
   

ಹಾವೇರಿ: ಇಲ್ಲಿಯ ಶಿವಬಸವನಗರದ ಮನೆಯೊಂದರ ಎದುರು ತುಂಬಿಟ್ಟಿದ್ದ ಬಕೆಟ್ ನೀರಿನಲ್ಲಿ ಬಿದ್ದು ಅಸ್ವಸ್ಥಗೊಂಡಿದ್ದ 14 ತಿಂಗಳ ದಕ್ಷಿತ್ ಎಂಬ ಮಗು ಹಾವೇರಿ‌ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ರಾತ್ರಿ ಮೃತಪಟ್ಟಿದೆ.

ಈ ಅವಘಡದ ಬಗ್ಗೆ ಹಾವೇರಿ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆಯ ಮುಂಭಾಗದಲ್ಲಿ ಅ.19ರಂದು ಮಗು ಆಟವಾಡುತ್ತಿತ್ತು. ಮನೆಯ ಎದುರು ನೀರು ತುಂಬಿದ್ದ ಬಕೆಟ್‌ನಲ್ಲಿ ತಲೆ ಕೆಳಗಾಗಿ ಮಗು ಬಿದ್ದಿತ್ತು. ಅಲ್ಲಿಯೇ ಪ್ರಜ್ಞೆ ತಪ್ಪಿತ್ತು. ಬಕೆಟ್‌ನಲ್ಲಿ ಮಗುವಿನ ಕಾಲು ನೋಡಿದ್ದ ಪೋಷಕರು ಹಾಗೂ ಸ್ಥಳೀಯರು, ಮಗುವನ್ನು‌‌ ಮೇಲಕ್ಕೆ ಎತ್ತಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿಯೇ ಚಿಕಿತ್ಸೆಗೆ ಸ್ಪಂದಿಸದೇ ಮಗು ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.