ಬ್ಯಾಡಗಿ: 2023–24 ನೇ ಸಾಲಿನಲ್ಲಿ ತೆಗೆದಿರಿಸಲಾಗಿದ್ದ ₹ 37 ಲಕ್ಷ ಸ್ಥಳೀಯ ಶಾಸಕರ ಕ್ಷೇತ್ರಾಭಿವೃದ್ಧಿ ಅನುದಾನದಲ್ಲಿ 37 ಹಾಗೂ ಅಂಗವಿಕಲರ ಇಲಾಖೆಯಿಂದ 6 ವಾಹನ ಸೇರಿ ಒಟ್ಟು 43 ಸ್ವಯಂಚಾಲಿತ ತ್ರಿಚಕ್ರ ವಾಹನಗಳನ್ನು ಸೋಮವಾರ ಶಾಸಕ ಬಸವರಾಜ ಶಿವಣ್ಣನವರ ಫಲಾನುಭವಿಗಳಿಗೆ ವಿತರಿಸಿದರು.
ಪಟ್ಟಣದ ಸಿದ್ಧೇಶ್ವರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಫಲಾನುಭವಿಗಳನ್ನು ಪಕ್ಷಾತೀತವಾಗಿ, ಜಾತ್ಯತೀತವಾಗಿ ಆಯ್ಕೆ ಮಾಡಲಾಗಿದೆ. ಗುಣಮಟ್ಟದ ವಾಹನಗಳನ್ನು ವಿತರಿಸಲಾಗಿದೆ. ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಿ’ ಎಂದು ಮನವಿ ಮಾಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ವರ್ತಕರ ಸಂಘದ ಅಧ್ಯಕ್ಷ, ಸುರೇಶಗೌಡ್ರ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಾನಪ್ಪ ಚೂರಿ ಮಾತನಾಡಿದರು. ಮುಖಂಡರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.