ಶಿಗ್ಗಾವಿ: ‘ಆಧುನಿಕ ಮಾಧ್ಯಮದಲ್ಲಿ ಕ್ಷಯ ರೋಗದ ಕುರಿತು ಸಾಕಷ್ಟು ಜಾಗೃತಿ ಮೂಡಿದೆ. ಕ್ಷಯ ರೋಗ ಮುಕ್ತ ಭಾರತ ನಿರ್ಮಾಣಕ್ಕೆ ಕೈ ಜೋಡಿಸಬೇಕು’ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಟಿ.ಎಂ. ಭಾಸ್ಕರ್ ಹೇಳಿದರು.
ತಾಲ್ಲೂಕಿನ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಮಲ್ಲಿಗೆ ದಂಡೆ ಸಭಾಂಗಣದಲ್ಲಿ ಶನಿವಾರ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಕೋಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆದ ಕ್ಷಯ ರೋಗ ಮುಕ್ತ ಭಾರತ ಅಭಿಯಾನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ರೋಗ ಮುಕ್ತರಾಗಿರಲು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು. ಪೌಷ್ಟಿಕ ಆಹಾರ ಸೇವನೆ ಮಾಡಬೇಕು. ರೋಗ ಕುರಿತು ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು’ ಎಂದರು.
ಕುಲಸಚಿವ ಪ್ರೊ. ಸಿ.ಟಿ ಗುರುಪ್ರಸಾದ್, ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ನಾಗೇಶ ಗುಂಗಿ, ಹಿರಿಯ ಆರೋಗ್ಯ ಸಹಾಯಕ ನಿಂಗಪ್ಪ ಎನ್.ಎಚ್., ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಪ್ರಭು ಕಟ್ಟಿ ಮಾತನಾಡಿದರು.
ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಗಿರೇಗೌಡ ಅರಳಿಹಳ್ಳಿ, ಜನಪದ ಕಲಾವಿದ ಶರೀಫ ಮಾಕಪ್ಪನವರ, ಸಹಾಯಕ ಪ್ರಾಧ್ಯಾಪಕ ಅಭಿನಯ ಎಚ್, ಸಹಾಯಕ ಪ್ರಾಧ್ಯಾಪಕ ಬಂಡುಸುರೇಶ ಕೆಂಪವಾಡೇಕರ, ಮೌಲ್ಯಮಾಪನ ಕುಲಸಚಿವ ಶಿವಶಂಕರ್ ಕೆ. ಇದ್ದರು.
ರೋಗ ನಿಯಂತ್ರಣಕ್ಕೆ ಜಾಗೃತಿ ಉತ್ತಮ ಆರೋಗ್ಯಕ್ಕೆ ಪೌಷ್ಟಿಕ ಆಹಾರ ಅಗತ್ಯ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.