ಗುತ್ತಲ: ಮಲೆನಾಡು ಭಾಗಲ್ಲಿ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾದ ಹಿನ್ನೆಲೆಯಲ್ಲಿ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಬಿಟ್ಟಿರುವುದರಿಂದ ತುಂಗಭದ್ರಾ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ.
ತುಂಗಾಭದ್ರ ನದಿಯ ಪಕ್ಕದಲ್ಲಿರುವ ಹಾವೇರಿ ಪೂರ್ವ ಭಾಗದ ಗ್ರಾಮಗಳಾದ ಕಂಚಾರಗಟ್ಟಿ ಹರಳಹಳ್ಳಿ ಹಾವನೂರ ಮೇವುಂಡಿ ಗಳಗನಾಥ ಗ್ರಾಮಗಳ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ರೈತರ ಪಂಪ್ ಸೆಟ್ ಗಳು ನೀರಿನಲ್ಲಿ ಮುಳುಗಿವೆ. ಇದೇ ರೀತಿ ನದಿಗೆ ನೀರು ಹರಿದು ಬಂದರೆ ಗ್ರಾಮಗಳಿಗೆ ನೀರು ನುಗ್ಗುವ ಭೀತಿಯಲ್ಲಿ ಜನರು ಕಾಲ ಕಳೆಯುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.