ADVERTISEMENT

ಅತ್ಯಾಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2020, 13:37 IST
Last Updated 5 ಫೆಬ್ರುವರಿ 2020, 13:37 IST

ಹಾವೇರಿ: ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ರಾಣೇಬೆನ್ನೂರಿನ ಖಾಸಗಿ ಉದ್ಯೋಗಿ ಅನಿಲ ನಾಯಕ ಎಂಬಾತನಿಗೆ ಹಾವೇರಿಯ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಕಿರಣ್ ಕಿಣಿ ಅವರು 20 ವರ್ಷ ಶಿಕ್ಷೆ ಹಾಗೂ ₹16 ಸಾವಿರ ದಂಡ ವಿಧಿಸಿದ್ದಾರೆ.

ಅನಿಲ ನಾಯಕ ಬಾಲಕಿಯನ್ನು ಮದುವೆಯಾಗಿ ನಂಬಿಸಿ ಅತ್ಯಾಚಾರ ಎಸಗಿದ ಬಗ್ಗೆ 2014ರಲ್ಲಿ ರಾಣೆಬೆನ್ನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಸಿದ್ಧಾರೂಡ ಎಂ. ಗೆಜ್ಜಿಹಳ್ಳಿ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT