ADVERTISEMENT

ನಿಗದಿತ ಅವಧಿಯಲ್ಲಿ ಅನುದಾನ ಬಳಸಿ: ಹಾವೇರಿ ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2020, 14:26 IST
Last Updated 25 ನವೆಂಬರ್ 2020, 14:26 IST
ಹಾವೇರಿಯಲ್ಲಿ ಬುಧವಾರ ಬುಡಕಟ್ಟು ಉಪಯೋಜನೆಗಳಡಿ ರಾಜ್ಯವಲಯ, ಜಿಲ್ಲಾ ಪಂಚಾಯಿತಿ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಮಾತನಾಡಿದರು 
ಹಾವೇರಿಯಲ್ಲಿ ಬುಧವಾರ ಬುಡಕಟ್ಟು ಉಪಯೋಜನೆಗಳಡಿ ರಾಜ್ಯವಲಯ, ಜಿಲ್ಲಾ ಪಂಚಾಯಿತಿ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಮಾತನಾಡಿದರು    

ಹಾವೇರಿ: ‘ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳಿಗಾಗಿ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಬಿಡುಗಡೆಯಾದ ವಾರ್ಷಿಕ ಅನುದಾನವನ್ನು ನಿಗದಿತಅವಧಿಯಲ್ಲಿ ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಅಧಿನಿಯಮ-2013ರ ಅನ್ವಯ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಗಳ ಅಡಿ ರಾಜ್ಯವಲಯ, ಜಿಲ್ಲಾ ಪಂಚಾಯಿತಿ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿದ್ಯಾರ್ಥಿ ವೇತನ ಹೊರತುಪಡಿಸಿದಂತೆ ಫಲಾನುಭವಿಗಳ ಆಧಾರಿತ ಕಾರ್ಯಕ್ರಮಗಳಿಗೆ ಇಲಾಖಾವಾರು ಬಿಡುಗಡೆ ಮಾಡಿದ ಅನುದಾನ ಬಳಕೆಗೆ ಆದ್ಯತೆ ನೀಡಬೇಕು. ಕೊರೊನಾ ಆರ್ಥಿಕ ಸಂಕಷ್ಟ ಸಂದರ್ಭದಲ್ಲಿ ಸರ್ಕಾರ ಬಿಡುಗಡೆ ಮಾಡಿರುವ ಅನುದಾನ ವಾಪಸ್‌ ಹೋಗಬಾರದು. ಈವರೆಗೆ ಶೇ 70ರಷ್ಟು ಅನುದಾನ ಬಳಕೆಯಾಗಬೇಕಾಗಿತ್ತು. ಕಡಿಮೆ ಸಾಧನೆ ಮಾಡಿದ ಇಲಾಖೆಗಳು ತ್ವರಿತವಾಗಿ ಕಾರ್ಯಕ್ರಮ ಅನುಷ್ಠಾನಗೊಳಿಸಲು ಸೂಚನೆ ನೀಡಿದರು.

ADVERTISEMENT

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಚೈತ್ರಾ, ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ನಾಗರಾಜ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್‌ ಭಾವನಾಮೂರ್ತಿ, ಮೀನುಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಸಂತೋಷ ಕೊಪ್ಪದ, ರೇಷ್ಮೆ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನಸ್ವಾಮಿ, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ರಾಜೀವ ಕೂಲೇರ, ಡಿಡಿಪಿಐ ಅಂದಾನಪ್ಪ ವಡಗೇರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.