ADVERTISEMENT

ವಾಲ್ಮೀಕಿ ಜಯಂತಿ: ಸಾಧಕರಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2020, 13:44 IST
Last Updated 31 ಅಕ್ಟೋಬರ್ 2020, 13:44 IST
ಹಾವೇರಿ ಜಿಲ್ಲಾಡಳಿತ ಭವನದಲ್ಲಿ ಶನಿವಾರ ಆಯೋಜಿಸಿದ್ದ ವಾಲ್ಮೀಕಿ ಜಯಂತಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲಾಡಳಿತ ವತಿಯಿಂದ ಸನ್ಮಾನಿಸಲಾಯಿತು
ಹಾವೇರಿ ಜಿಲ್ಲಾಡಳಿತ ಭವನದಲ್ಲಿ ಶನಿವಾರ ಆಯೋಜಿಸಿದ್ದ ವಾಲ್ಮೀಕಿ ಜಯಂತಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲಾಡಳಿತ ವತಿಯಿಂದ ಸನ್ಮಾನಿಸಲಾಯಿತು   

ಹಾವೇರಿ: ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಶ್ರದ್ದೆ ಹಾಗೂ ಅರ್ಥಪೂರ್ಣವಾಗಿ ಜಿಲ್ಲಾಡಳಿತದಿಂದ ಆಚರಿಸಲಾಯಿತು.

ಕೋವಿಡ್ ಹಾಗೂ ಪದವೀಧರರ ಕ್ಷೇತ್ರದ ಚುನಾವಣಾ ನೀತಿಸಂಹಿತೆ ಹಿನ್ನಲೆಯಲ್ಲಿ ಶನಿವಾರ ಬೆಳಿಗ್ಗೆ ಜಿಲ್ಲಾಡಳಿತ ಭವನದಲ್ಲಿ ಸರಳವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣವರ ಹಾಗೂ ಜಿಲ್ಲಾ ಪಂಚಾಯಿತಿಅಧ್ಯಕ್ಷ ಏಕನಾಥ ಬಾನುವಳ್ಳಿ ಅವರು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಪರಿಶಿಷ್ಠ ವರ್ಗದ ವಿದ್ಯಾರ್ಥಿನಿಯಾದ ಪಲ್ಲವಿ ಉಮೇಶಕುಮಾರ ಮರೋಳ ಇವರಿಗೆ ಇಲಾಖೆಯಿಂದ ₹1 ಲಕ್ಷ ಪ್ರೋತ್ಸಾಹಧನ ಚೆಕ್ ವಿತರಿಸಿ ಸನ್ಮಾನಿಸಲಾಯಿತು.

ADVERTISEMENT

ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ಕಲಾ ವಿಭಾಗದ ವಿದ್ಯಾರ್ಥಿ ಪುನೀತ ತಿಪ್ಪಣ್ಣನವರ, ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸಂಗೀತಾ ಅಡಿಕಾರ, ಹಾಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿ ಮೋಹನರಾಜ್ ಪಾಟೀಲ ಇವರಿಗೆ ಪ್ರೋತ್ಸಾಹಧನದ ಚೆಕ್ ವಿತರಿಸಿ ಗೌರವಿಸಲಾಯಿತು. ಅಂತರ್ಜಾತಿ ವಿವಾಹವಾದ ಪರಿಶಿಷ್ಟ ಪಂಗಡದ ದಂಪತಿಗಳಿಗೆ ಪ್ರೋತ್ಸಾಹಧನ ಚೆಕ್ ವಿತರಣೆ ಮಾಡಿ ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಜಿ.ಪಂ. ಸದಸ್ಯ ವಿರೂಪಾಕ್ಷಪ್ಪ ಕಡ್ಲಿ, ಸಿಇಒ ರಮೇಶ ದೇಸಾಯಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಯೋಗೇಶ್ವರ ಅವರು ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಾನಂದ ಕಲ್ಲಪ್ಪನವರ ಹಾಗೂ ಸಮಾಜದ ವಿವಿಧ ಮುಖಂಡರು ಭಾಗವಹಿಸಿದ್ದರು.

ಸಂಸ್ಕೃತ ಉಪನ್ಯಾಸಕ ಜಿ.ಎಸ್. ಭಟ್ ರಾಮಾಯಣ ಮಹಾಕಾವ್ಯದ ಶ್ಲೋಕ ವಾಚನ ಮಾಡಿದರು. ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕೆ. ನಾಗರಾಜ್ ಸ್ವಾಗತಿಸಿದರು. ಬಸವರಾಜ ದಲ್ಲನ್ನವರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.