ADVERTISEMENT

ವರದಾ–ಬೇಡ್ತಿ ನದಿಗಳ ಜೋಡಣೆಗೆ ಕೇಂದ್ರದ ತಾತ್ವಿಕ ಒಪ್ಪಿಗೆ: ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2025, 2:34 IST
Last Updated 23 ಆಗಸ್ಟ್ 2025, 2:34 IST
<div class="paragraphs"><p>ಬಸವರಾಜ ಬೊಮ್ಮಾಯಿ</p></div>

ಬಸವರಾಜ ಬೊಮ್ಮಾಯಿ

   

ಹಾವೇರಿ: ‘ವರದಾ–ಬೇಡ್ತಿ ನದಿಗಳ ಜೋಡಣೆ ವಿಚಾರದಲ್ಲಿ ಕೇಂದ್ರ ಸರ್ಕಾರವು ತಾತ್ವಿಕ ಒಪ್ಪಿಗೆ ನೀಡಿದೆ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಶುಕ್ರವಾರ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ತುಂಗಭದ್ರಾ ನದಿಯಲ್ಲಿ ಬೇಸಿಗೆಯ 3–4 ತಿಂಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗುತ್ತದೆ. ಅದಕ್ಕೆ ವರದಾ–ಬೇಡ್ತಿ ನದಿಯ ಜೋಡಣೆ ಅಗತ್ಯವಿದೆ’ ಎಂದರು.

ADVERTISEMENT

‘ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ಕೊಟ್ಟಿದ್ದು, ರಾಜ್ಯ ಸರ್ಕಾರ ಈ ಪ್ರಕ್ರಿಯೆಯನ್ನು ಮುಂದಕ್ಕೆ ತೆಗೆದುಕೊಂಡು ಹೋಗಬೇಕು. ನನ್ನ ಈ ಆಗ್ರಹವನ್ನು ರಾಜ್ಯ ಸರ್ಕಾರ ಸಹ ಒಪ್ಪಿಕೊಂಡಿದೆ. ಯೋಜನೆ ಜಾರಿಯಾದರೆ ಸುಮಾರು 18 ಟಿಎಂಸಿ ನೀರು ಬರುತ್ತದೆ. ಅದರಿಂದ ನೀರಿನ ಸಮಸ್ಯೆ ನಿವಾರಣೆಯಾಗಲಿದೆ. ಯೋಜನೆ ಜಾರಿಗೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.