ಗುತ್ತಲ: ಉತ್ತರಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ವರದಾ ನದಿಗೆ ಬಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಹಾವೇರಿ ತಾಲ್ಲೂಕಿನ ಅಕ್ಕೂರ ಮತ್ತು ಮರಡೂರ ಗ್ರಾಮಗಳ ಮಧ್ಯ ವರದಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬ್ರಿಡ್ಜ್ ಕಂ ಬ್ಯಾರೇಜ್ ಮುಳುಗಿ 20ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತಗೊಂಡಿವೆ.
ವರದಾ ನದಿ ನೀರಿನ ಹರಿವು ಹೀಗೆ ಮುಂದುವರಿದರೆ ವರದಾ ನದಿಯ ದಡದಲ್ಲಿರುವ ಸಾವಿರಾರು ಎಕರೆ ಪ್ರದೇಶದ ಬೆಳೆ ನಾಶವಾಗುವ ಆತಂಕ ರೈತರನ್ನು ಕಡುತ್ತಿದೆ.
ತುಂಗಭದ್ರೆಗೆ 30 ಸಾವಿರ ಕ್ಯೂಸೆಕ್ ನೀರು: ಹಾವೇರಿ, ದಾವಣಗೇರೆ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ತುಂಗಭದ್ರ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ.
ಭದ್ರಾ ಜಲಾಶಯ ಭರ್ತಿಯಾಗಲು ಕೇಲವೆ ಅಡಿಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಭದ್ರ ಜಲಾಶಯದಿಂದ ತುಂಗಭದ್ರ ನದಿಗೆ ಶನಿವಾರ 30 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. ತುಂಗಭದ್ರಾ ನದಿಗೆ ಬಾರಿ ಪ್ರಮಾಣದ ನೀರು ಹರಿದು ಬರುವ ಸಾಧ್ಯತೆ ಇರುವುದರಿಂದ ರೈತರು ತಮ್ಮ ಪಂಪ್‌ಸೆಟ್‌ಗಳನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸುತ್ತಿದ್ದಾರೆ. ಆದರೆ ಬೆಳೆ ಮುಳುಗುವ ಆತಂಕದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.