ಹಾವೇರಿ: ‘ಮಹಾಯೋಗಿ ವೇಮನರ ಸರಳತೆ, ಚಿಂತನೆಗಳು ಸಮಾಜದ ಅಭಿವೃದ್ಧಿಗೆ ಪೂರಕವಾಗಿದೆ. ವೇಮನರ ಚಿಂತನೆಗಳು ನಮ್ಮ ವ್ಯಕ್ತಿತ್ವದ ಬೆಳವಣಿಗೆಗೆ ಸಹಕಾರಿಯಾಗಿವೆ’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಏಕನಾಥ ಭಾನುವಳ್ಳಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮದಲ್ಲಿ ಮಹಾಯೋಗಿ ವೇಮನ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.
ಮಹಾಯೋಗಿ ವೇಮನರ ಸಮುದಾಯದ ಏಳಿಗೆಗಾಗಿ ಸರ್ಕಾರದ ಯೋಜನೆಗಳನ್ನು ಪ್ರಾಮಾಣಿಕವಾಗಿ ಜಾರಿಗೊಳಿಸಲಾಗುವುದು. ಈ ಸಮಾಜದ ಅಭಿವೃದ್ಧಿಗೆ ನಿಸ್ವಾರ್ಥವಾಗಿ ಕಾರ್ಯನಿರ್ವಹಿಸುವುದಾಗಿ ಅವರು ಭರವಸೆ ನೀಡಿದರು.
ಸಮುದಾಯದ ನೂತನ ಗ್ರಾಮ ಪಂಚಾಯಿತಿ ಸದಸ್ಯರನ್ನು ಸನ್ಮಾನಿಸಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಯೋಗೇಶ್ವರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ, ಸಮಾಜದ ವಿವಿಧ ಮುಖಂಡರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.