ADVERTISEMENT

ಕುಮಾರಪಟ್ಟಣ: ವೆಂಕಟೇಶ್ವರ ಸ್ವಾಮಿ ರಥೋತ್ಸವ

​ಪ್ರಜಾವಾಣಿ ವಾರ್ತೆ
Published 24 ಮೇ 2024, 5:50 IST
Last Updated 24 ಮೇ 2024, 5:50 IST
ಕುಮಾರಪಟ್ಟಣ ಸಮೀಪದ ಐರಣಿ ಗ್ರಾಮದ ಹೊರ ಭಾಗದಲ್ಲಿರುವ ಬೆಟ್ಟದ ಲಕ್ಷ್ಮೀವೆಂಕಟೇಶ್ವರ ಸ್ವಾಮಿ ರಥೋತ್ಸವ ಗುರುವಾರ ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು
ಕುಮಾರಪಟ್ಟಣ ಸಮೀಪದ ಐರಣಿ ಗ್ರಾಮದ ಹೊರ ಭಾಗದಲ್ಲಿರುವ ಬೆಟ್ಟದ ಲಕ್ಷ್ಮೀವೆಂಕಟೇಶ್ವರ ಸ್ವಾಮಿ ರಥೋತ್ಸವ ಗುರುವಾರ ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು   

ಕುಮಾರಪಟ್ಟಣ: ರಾಣೆಬೆನ್ನೂರು ತಾಲ್ಲೂಕಿನ ಐರಾವತ ಕ್ಷೇತ್ರ ಐರಣಿ ಗ್ರಾಮದ ತುಂಗಭದ್ರಾ ನದಿ ತೀರದ ಬೆಟ್ಟದ ಮೇಲಿರುವ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ರಥೋತ್ಸವ ಹುಣ್ಣಿಮೆಯಂದು ಗುರುವಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

ಸಂತಶ್ರೇಷ್ಠ ಕರ್ಕಿಹಳ್ಳಿಮಠ (ಕನವಳ್ಳಿ) ಸುರೇಶ ಪಾಟೀಲ ಇವರ ಸಾನ್ನಿಧ್ಯದಲ್ಲಿ ಬೆಳಿಗ್ಗೆ ಹೋಮ, ಹವನ, ಪೂಜಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ವೆಂಕಟೇಶ್ವರ ಸ್ವಾಮಿಯ ರಥೋತ್ಸವ ಜರುಗಿತು.

ಭಕ್ತರಿಗೆ ಕೋಸಂಬರಿ, ಬೆಲ್ಲದ ಪಾನಕ ವಿತರಿಸಿದ ನಂತರ ಅನ್ನಸಂತರ್ಪಣೆ ನಡೆಯಿತು. ಸಂಜೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ ನಡೆಯಿತು.

ADVERTISEMENT

ಐರಣಿ ಲಕ್ಷ್ಮೀವೆಂಕಟೇಶ್ವರ ಪಂಚ ದೇವಸ್ಥಾನ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ರಾಣೆಬೆನ್ನೂರು, ಹರಿಹರ, ಐರಣಿ ಮತ್ತು ಬೇರೆಡೆಯಿಂದ ಬಂದ ಭಕ್ತರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.