ADVERTISEMENT

ರಾಣೆಬೆನ್ನೂರು | ಭೂಮಿ ಫಲವತ್ತತೆ ಹೆಚ್ಚಿಸಲು ಜಾಗೃತಿ ಅಗತ್ಯ– ಪಿ.ಎಲ್. ಪಾಟೀಲ

​ಪ್ರಜಾವಾಣಿ ವಾರ್ತೆ
Published 30 ಜನವರಿ 2026, 4:46 IST
Last Updated 30 ಜನವರಿ 2026, 4:46 IST
ರಾಣೆಬೆನ್ನೂರು ತಾಲ್ಲೂಕಿನ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆದ ವೈಜ್ಞಾನಿಕ ಸಲಹಾ ಸಮಿತಿ ಸಭೆಯನ್ನು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪಿ.ಎಲ್. ಪಾಟೀಲ ಉದ್ಘಾಟಿಸಿದರು 
ರಾಣೆಬೆನ್ನೂರು ತಾಲ್ಲೂಕಿನ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆದ ವೈಜ್ಞಾನಿಕ ಸಲಹಾ ಸಮಿತಿ ಸಭೆಯನ್ನು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪಿ.ಎಲ್. ಪಾಟೀಲ ಉದ್ಘಾಟಿಸಿದರು    

ರಾಣೆಬೆನ್ನೂರು: ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಯನ್ನು ಸಮರ್ಪಕವಾಗಿ ನಿರ್ವಹಿಸುವ ತಂತ್ರಜ್ಞಾನ ಪ್ರಚಲಿತಗೊಳಿಸುವ ಅವಶ್ಯಕತೆ ಇದೆ. ಕೃಷಿ ಭೂಮಿಯ ಫಲವತ್ತತೆ ಹೆಚ್ಚಿಸುವ ಜಾಗೃತಿ ಕಾರ್ಯಕ್ರಮ ನಡೆಸಬೇಕು’ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪಿ.ಎಲ್. ಪಾಟೀಲ ಹೇಳಿದರು.

ತಾಲ್ಲೂಕಿನ ಹನುಮನಮಟ್ಟಿ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವೈಜ್ಞಾನಿಕ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮಣ್ಣು ಪರೀಕ್ಷೆ, ಬೀಜೋತ್ಪಾದನೆ, ತೋಟಗಾರಿಕೆ ಸಸಿ ಉತ್ಪಾದನೆ ಕುರಿತು ವಿವರಿಸಿದರು.

ಈ ವೇಳೆ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದಿಂದ ಅಭಿವೃದ್ಧಿಪಡಿಸಿದ ವಿವಿಧ ಹಸ್ತಪ್ರತಿ ಬಿಡುಗಡೆ ಗೊಳಿಸಲಾಯಿತು. ಮಣ್ಣು ಮತ್ತು ನೀರು ಪರೀಕ್ಷಾ ಪ್ರಯೋಗಾಲಯ ಉದ್ಘಾಟಿಸಲಾಯಿತು.

ADVERTISEMENT

ಧಾರವಾಡ ಕೃಷಿ ವಿಶ್ವವಿದ್ಯಾಲಯ ವಿಸ್ತರಣಾ ನಿರ್ದೇಶಕ ಎಂ.ವಿ. ಮಂಜುನಾಥ, ಹಾವೇರಿಯ ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಮಲ್ಲಿಕಾರ್ಜುನ ಕೆ, ಮಾತನಾಡಿದರು. ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಎ.ಎಚ್. ಬಿರಾದಾರ ಅವರು ಪ್ರಗತಿ ವರದಿ ಮಂಡಿಸಿದರು.

ಕೆ.ವಿ. ಬಸವಕುಮಾರ, ಉಸ್ತುವಾರಿ ಅಧಿಕಾರಿ ಎಸ್.ಎಲ್. ಪಾಟೀಲ, ಸಿ.ಪಿ. ಮಲ್ಲಾಪುರ, ಗಂಗಾಧರ್ ಕೆ, ಅಟಾರಿ, ನಾಗರಾಜು ಪಿ, ಕರಿಯಲ್ಲಪ್ಪ ಕೆ, ಶಿವಯೋಗಿ ಯಲಿ, ಅನಿಲ್ ಜಿ. ಬಡ್ನಿ, ನರ್ಮದಾ ಎಂ, ರೇಷ್ಮೆ, ಶಂಕರಗೌಡ ಪಾಟೀಲ, ಮಧುರಾ ನವಲೆ ಇದ್ದರು.

ರಾಣೆಬೆನ್ನೂರು ತಾಲ್ಲೂಕಿನ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದಲ್ಲಿ  48 ನೇ ವೈಜ್ಞಾನಿಕ ಸಲಹಾ ಸಮಿತಿ ಸಭೆಯಲ್ಲಿ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದಿಂದ ಅಭಿವೃದ್ಧಿಪಡಿಸಿರುವ ವಿವಿಧ ಹಸ್ತಪ್ರತಿಗಳು ಬಿಡುಗಡೆ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.