ADVERTISEMENT

ದೆಹಲಿಯಲ್ಲಿ ಗೆಲುವು: ಬ್ಯಾಡಗಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2025, 13:28 IST
Last Updated 9 ಫೆಬ್ರುವರಿ 2025, 13:28 IST
ಬ್ಯಾಡಗಿ ಪಟ್ಟಣದಲ್ಲಿ ಬಿಜೆಪಿ  ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು
ಬ್ಯಾಡಗಿ ಪಟ್ಟಣದಲ್ಲಿ ಬಿಜೆಪಿ  ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು   

ಬ್ಯಾಡಗಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟ್ಟಣದ ಹಳೆ ಪುರಸಭೆ ಎದುರು ಶನಿವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ‘ದೆಹಲಿ ಚುನಾವಣೆಯಲ್ಲಿ ಒಂದೂ ಸ್ಥಾನ ಗಳಿಸಲು ಶಕ್ತವಾಗದ ಕಾಂಗ್ರೆಸ್‌ ಒಂದು ಪ್ರಾದೇಶಿಕ ಪಕ್ಷವಾಗಿ ಪರಿವರ್ತನೆಗೊಂಡಿದೆ. ಭವಿಷ್ಯದಲ್ಲಿ ಬರುವ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್‌ ಪಕ್ಷ ಶೂನ್ಯ ಫಲಿತಾಂಶ ಪಡೆಯಲಿದೆ’ ಎಂದರು. 

ತಾಲ್ಲೂಕು ಘಟಕದ ಅಧ್ಯಕ್ಷ ಶಿವಯೋಗಿ ಶಿರೂರ, ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾಶೆಟ್ಟಿ, ಪುರಸಭೆ ಸದಸ್ಯರಾದ ಚಂದ್ರಣ್ಣ ಶೆಟ್ಟರ, ಹನುಮಂತಪ್ಪ ಮ್ಯಾಗೇರಿ, ಫಕ್ಕೀರಮ್ಮ ಛಲವಾದಿ, ಮುಖಂಡರಾದ ವಿಜಯ ಮಾಳಗಿ, ಸುರೇಶ ಯತ್ನಳ್ಳಿ, ಮುರಿಗೆಪ್ಪ ಶೆಟ್ಟರ ಸೇರಿದಂತೆ ಅನೇಕರು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.