ಹಾವೇರಿ: ನೆರೆ ಪರಿಹಾರ ವಿತರಣೆಯಲ್ಲಿ ನಡೆದಿರುವ ಅಕ್ರಮ ಮತ್ತು ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾನಗಲ್ ತಾಲ್ಲೂಕು ಶಿರಗೋಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಲೆಕ್ಕಾಧಿಕಾರಿ ಚಿಪ್ಪಲಕಟ್ಟಿ ಅವರನ್ನು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅಮಾನತುಗೊಳಿಸಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೂ ಒಟ್ಟು 7 ಗ್ರಾಮ ಲೆಕ್ಕಾಧಿಕಾರಿಗಳು ಅಮಾನತುಗೊಂಡಿದ್ದಾರೆ.
ಜಿಲ್ಲೆಯಲ್ಲಿ ಬೆಳೆ ಹಾನಿ ಮತ್ತು ಮನೆ ಹಾನಿ ಪರಿಹಾರ ವಿತರಣೆಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಶಿಗ್ಗಾವಿ, ಹಾನಗಲ್, ಸವಣೂರು ಮತ್ತು ಹಾವೇರಿ ತಾಲ್ಲೂಕಿನ ಪೊಲೀಸ್ ಠಾಣೆಗಳಲ್ಲಿ ಕಂಪ್ಯೂಟರ್ ಆಪರೇಟರ್, ಗ್ರಾಮ ಲೆಕ್ಕಾಧಿಕಾರಿ ಮತ್ತು ತಹಶೀಲ್ದಾರ್ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.