ADVERTISEMENT

ಶ್ರೀನಿವಾಸ ಮಾನೆ ಜನಸಂಪರ್ಕ ಕಚೇರಿಯಲ್ಲಿ ವಿವೇಕಾನಂದ ಜಯಂತಿ

​ಪ್ರಜಾವಾಣಿ ವಾರ್ತೆ
Published 13 ಜನವರಿ 2026, 3:20 IST
Last Updated 13 ಜನವರಿ 2026, 3:20 IST
ಹಾನಗಲ್‌ ಶಾಸಕ ಶ್ರೀನಿವಾಸ ಮಾನೆ ಅವರ ಜನಸಂಪರ್ಕ ಕಚೇರಿಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಆಚರಿಸಲಾಯಿತು
ಹಾನಗಲ್‌ ಶಾಸಕ ಶ್ರೀನಿವಾಸ ಮಾನೆ ಅವರ ಜನಸಂಪರ್ಕ ಕಚೇರಿಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಆಚರಿಸಲಾಯಿತು   

ಹಾನಗಲ್: ಶಾಸಕ ಶ್ರೀನಿವಾಸ ಮಾನೆ ಅವರ ಜನಸಂಪರ್ಕ ಕಚೇರಿಯಲ್ಲಿ ಸೋಮವಾರ ಅದಮ್ಯ ಚೇತನ ಸ್ವಾಮಿ ವಿವೇಕಾನಂದ ಜಯಂತಿ ಆಚರಿಸಲಾಯಿತು.

ವಿವೇಕಾನಂದರ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಪುರಸಭೆ ಮಾಜಿ ಅಧ್ಯಕ್ಷ ಪರಶುರಾಮ ಖಂಡೂನವರ, ಸ್ವಾಮಿ ವಿವೇಕಾನಂದರು ಯುವಶಕ್ತಿಗೆ ದಿಕ್ಕು ತೋರಿದ ಮಹಾನ್ ಚಿಂತಕರಾಗಿದ್ದು, ಅವರ ಏಳಿರಿ, ಎಚ್ಚರಗೊಳ್ಳಿರಿ, ಗುರಿ ತಲುಪುವವರೆಗೂ ನಿಲ್ಲಬೇಡಿ ಎಂಬ ಸಂದೇಶ ಇಂದಿಗೂ ಪ್ರೇರಣೆಯಾಗಿದೆ. ಅವರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸುವುದರ ಹಿಂದೆ ಯುವಜನರನ್ನು ರಾಷ್ಟ್ರ ನಿರ್ಮಾಣಕ್ಕೆ ತೊಡಗಿಸುವ ಉದ್ದೇಶವಿದೆ ಎಂದರು.

ಕೆಪಿಸಿಸಿ ಸದಸ್ಯ ಖ್ವಾಜಾಮೊಹಿದ್ದೀನ ಜಮಾದಾರ, ನಗರ ಕಾಂಗ್ರೆಸ್ ಅಧ್ಯಕ್ಷ ಮತೀನ್ ಶಿರಬಡಗಿ, ಲಿಂಗರಾಜ ಮಡಿವಾಳರ, ವಿನಯ ಬಂಕನಾಳ, ವಸಂತ ವೆಂಟಾಪುರ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.