ADVERTISEMENT

‘ಕಡ್ಡಾಯವಾಗಿ ಮಾಸ್ಕ್ ಧರಿಸಿ’

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2020, 3:26 IST
Last Updated 5 ಡಿಸೆಂಬರ್ 2020, 3:26 IST
ಸವಣೂರ ಪಟ್ಟಣದ ಶುಕ್ರವಾರ ಸಂತೆಯಲ್ಲಿ ಮಾಸ್ಕ್ ಧರಿಸದೆ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳಿಗೆ ಎಸಿ ಅನ್ನಪೂರ್ಣ ಮುದಕಮ್ಮನವರ ದಂಡ ವಿಧಿಸಿದರು
ಸವಣೂರ ಪಟ್ಟಣದ ಶುಕ್ರವಾರ ಸಂತೆಯಲ್ಲಿ ಮಾಸ್ಕ್ ಧರಿಸದೆ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳಿಗೆ ಎಸಿ ಅನ್ನಪೂರ್ಣ ಮುದಕಮ್ಮನವರ ದಂಡ ವಿಧಿಸಿದರು   

ಸವಣೂರ: ಅಂತರನು ಕಾಯ್ದುಕೊಂಡು, ಮಾಸ್ಕ್ ಧರಿಸುವ ಮೂಲಕ ಕೋವಿಡ್-19 ಹರಡದಂತೆ ನೋಡಿಕೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ತಿಳಿಸಿದರು.

ಪಟ್ಟಣದಲ್ಲಿ ಶುಕ್ರವಾರ ಜರುಗುವ ವಾರದ ಸಂತೆಯಲ್ಲಿ ಉಪವಿಭಾಗಾಧಿಕಾರಿಗಳ ಕಾರ್ಯಾಲಯ, ಕಂದಾಯ ಇಲಾಖೆ, ಪೋಲಿಸ್ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಪುರಸಭೆ ವತಿಯಿಂದ ಮಾಸ್ಕ್‌ ಅಭಿಯಾನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ, ಬಿಇಒ ಐ.ಬಿ. ಬೆನಕೊಪ್ಪ, ಪುರಸಭೆ ಮುಖ್ಯಾಧಿಕಾರಿ ಕೃಷ್ಣಾ ಕಟ್ಟಿಮನಿ, ಟಿಎಚ್ಒ ಡಾ. ಚಂದ್ರಕಲಾ ಜೆ, ಆರೋಗ್ಯ ಇಲಾಖೆ ಸಿಬ್ಬಂದಿ ಪ್ರಕಾಶ ಪೂಜಾರ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.