ADVERTISEMENT

25 ಸಾವಿರ ಮತಗಳ ಅಂತರದಿಂದ ಗೆಲ್ಲತ್ತೇವೆ: ಯಡಿಯೂರಪ್ಪ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2021, 15:33 IST
Last Updated 23 ಅಕ್ಟೋಬರ್ 2021, 15:33 IST
ತಿಳವಳ್ಳಿ ಸಮೀಪದ ಮಕರವಳ್ಳಿ ಗ್ರಾಮದಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಪರವಾಗಿ ನಡೆದ ಸಾರ್ವಜನಿಕ ಪ್ರಚಾರ ಸಭೆಯನ್ನು ಉದ್ದೇಶಿಸಿ ಬಿ.ಎಸ್.ಯಡಿಯುರಪ್ಪ ಮಾತನಾಡಿದರು.
ತಿಳವಳ್ಳಿ ಸಮೀಪದ ಮಕರವಳ್ಳಿ ಗ್ರಾಮದಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಪರವಾಗಿ ನಡೆದ ಸಾರ್ವಜನಿಕ ಪ್ರಚಾರ ಸಭೆಯನ್ನು ಉದ್ದೇಶಿಸಿ ಬಿ.ಎಸ್.ಯಡಿಯುರಪ್ಪ ಮಾತನಾಡಿದರು.   

ತಿಳವಳ್ಳಿ: ಹಾನಗಲ್ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ 25 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ತಿಳವಳ್ಳಿ ಸಮೀಪದ ಮಕರವಳ್ಳಿ ಗ್ರಾಮದಲ್ಲಿ ಶನಿವಾರ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ‘ಕಾಂಗ್ರೆಸ್‌ನವರು ಹತಾಶೆಯಿಂದ ಮಾತನಾಡುವುದನ್ನು ನೋಡಿದರೆ ಅವರು ಈಗಾಲೇ ಸೋಲನ್ನು ಒಪ್ಪಿಕೊಂಡಿದ್ದಾರೆ. ಬಿಜೆಪಿ ಅನ್ನದಾತರ ಪಕ್ಷ. ಸಿ.ಎಂ.ಉದಾಸಿ ಅವರು ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ದೊರಕಬೇಕಾದರೆ ನೀವು ಶಿವರಾಜ ಸಜ್ಜನರನ್ನು ಗೆಲ್ಲಿಸಿ’ ಎಂದರು.

ಸಂಸದ ಶಿವಕುಮಾರ ಉದಾಸಿ ಮಾತನಾಡಿ, ‘ನಿನ್ನೆ ಮೊನ್ನೆ ಈ ಕ್ಷೇತ್ರಕ್ಕೆ ಬಂದವರನ್ನು ಆಪದ್ಬಾಂಧವ ಎಂದು ಕರೆಯುವುದಾದರೆ ಉದಾಸಿ ಅವರು 38 ವರ್ಷಗಳಿಂದ ಈ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ಅವರನ್ನು ಏನೆಂದು ಕರೆಯಬೇಕು’ ಎಂದು ಪ್ರಶ್ನಿಸಿದರು.

ADVERTISEMENT

ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಮಾತನಾಡಿ, ‘ನಾನು ಸಿ.ಎಂ.ಉದಾಸಿ ಅವರ ಗರಡಿಯಲ್ಲಿ ಬೆಳೆದಿದ್ದು, ಅವರ ಮಾದರಿಯಲ್ಲಿ ಹಾನಗಲ್ಲ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ’ ಎಂದರು.

ಸಚಿವರಾದ ಆರ್.ಅಶೋಕ, ಅರಗ ಜ್ಞಾನೇಂದ್ರ, ಸುನಿಲಕುಮಾರ, ಬಿ.ಸಿ.ಪಾಟೀಲ್, ನಾರಾಯಣ ಗೌಡ, ವಿರುಪಾಕ್ಷಪ್ಪ ಮಾಡಾಳ, ಯು.ಬಿ.ಬಣಕಾರ, ಮಹೇಶ ಟೆಂಗಿನಕಾಯಿ, ನೆಹರು ಓಲೇಕಾರ, ರಾಜು ಗೌಡ, ಎನ್.ರವಿಕುಮಾರ, ಶಿವಲಿಂಗಪ್ಪ ತಲ್ಲೂರ, ಹನುಮಂತಪ್ಪ ಕಲ್ಲೇರ, ಹನುಮಂತಪ್ಪ ಶಿರಾಳಕೊಪ್ಪ, ಗಣೇಶಪ್ಪ ಕೋಡಿಹಳ್ಳಿ, ಸುನೀಲ ಹಿರೇಮಠ ಮಾರುತಿ ಅಸುಂಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.