ರಟ್ಟೀಹಳ್ಳಿ: ನಿತ್ಯ ದುಡಿಯುವ ಕಾರ್ಮಿಕರು ತಮ್ಮ ಆರೋಗ್ಯದ ಕಡೆ ಗಮನಹರಿಸಬೇಕು. ಕಾಲಕಾಲಕ್ಕೆ ಅಗತ್ಯ ವೈದ್ಯಕೀಯ ಚಿಕಿತ್ಸೆ ಮಾಡಿಸಿಕೊಳ್ಳಬೇಕು ಎಂದು ನರೇಗಾ ಯೋಜನಾಧಿಕಾರಿ ಪ್ರದೀಪ ಗಣೇಶ್ಕರ ಹೇಳಿದರು.
ಅವರು ಬುಧವಾರ ತಾಲ್ಲೂಕಿನ ಚಿಕ್ಕಕಬ್ಬಾರ ಗ್ರಾಮದಲ್ಲಿ ನರೇಗಾ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಾರ್ಮಿಕರು ದೈಹಿಕವಾಗಿ ಆರೋಗ್ಯವಂತರಾಗಿರಲು ಅಗತ್ಯ ಪೌಷ್ಟಿಕ ಆಹಾರ ಸೇವಿಸಬೇಕು ಎಂದು ಸಲಹೆ ನೀಡಿದರು.
ಐಇಸಿ ಸಂಯೋಜಕ ಕುಮಾರಯ್ಯ ಚಿಕ್ಕಮಠ ಮಾತನಾಡಿ, ಬೇಸಿಗೆ ಸಂದರ್ಭದಲ್ಲಿಯೂ ನರೇಗಾ ಕಾರ್ಮಿಕರಿಗೆ ಕೆಲಸವನ್ನು ನೀಡುತ್ತಿದ್ದು, ದಿನಕ್ಕೆ ₹ 370 ನಂತೆ ಪಾವತಿ ಮಾಡಲಾಗುತ್ತಿದೆ. ಮಹಿಳಾ ಕಾರ್ಮಿಕರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನರೇಗಾ ಯೋಜನೆಯಡಿ ಉದ್ಯೋಗ ಕಲ್ಪಿಸಿಕೊಳ್ಳಬೇಕು ಎಂದರು.
ಈ ವೇಳೆ ನೂರಕ್ಕೂ ಅಧಿಕ ಕಾರ್ಮಿಕರಿಗೆ ರಕ್ತದೊತ್ತಡ, ಸಕ್ಕರೆ ಕಾಯಿಲೆ ತಪಾಸಣೆ ಮಾಡಲಾಯಿತು. ಅಗತ್ಯ ವೈದ್ಯಕೀಯ ಚಿಕಿತ್ಸಾ ಸಲಹೆ ನೀಡಲಾಯಿತು. ಸ್ಥಳದಲ್ಲಿ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.