ADVERTISEMENT

ಹಾವೇರಿ: ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಗೆ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2020, 13:50 IST
Last Updated 20 ನವೆಂಬರ್ 2020, 13:50 IST
ಹಾವೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಗೆ ವಿವಿಧ ಇಲಾಖೆಗಳ ಬಗ್ಗೆ ಕಿರು ಪರಿಚಯ ಮಾಡಿಕೊಡುವ ಕಾರ್ಯಕ್ರಮ ನಡೆಯಿತು 
ಹಾವೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಗೆ ವಿವಿಧ ಇಲಾಖೆಗಳ ಬಗ್ಗೆ ಕಿರು ಪರಿಚಯ ಮಾಡಿಕೊಡುವ ಕಾರ್ಯಕ್ರಮ ನಡೆಯಿತು    

ಹಾವೇರಿ: ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಗೆ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಬಗ್ಗೆ ಕಿರು ಪರಿಚಯ ಮಾಡಿಕೊಡುವ ಕಾರ್ಯಕ್ರಮ ಹಾವೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಶುಕ್ರವಾರ ನಡೆಯಿತು.

ವಾರ್ತಾಧಿಕಾರಿ ಬಿ.ಆರ್.ರಂಗನಾಥ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಜ್ಞಾನಾಧಾರಿತ ಇ-ತಂತ್ರಜ್ಞಾನ ಕಲಿಕಾ ವ್ಯವಸ್ಥೆಯ ಇಂದಿನ ದಿನಗಳಲ್ಲಿ ಭವಿಷ್ಯದಲ್ಲಿ ಶಿಕ್ಷಕರಾಗುವವರಿಗೆ ಪಠ್ಯಕ್ರಮ ಬೋಧನೆಯ ಜೊತೆಗೆ ಇತರ ಜ್ಞಾನಗಳ ಕಲಿಕೆ ಅತ್ಯವಶ್ಯವಾಗಿದೆ. ಭವಿಷ್ಯದಲ್ಲಿ ನಾನಾ ಇಲಾಖೆಗಳಲ್ಲಿ ಸೇವೆಗೆ ಸೇರುವ ಅವಕಾಶವಿರುವ ಬಿ.ಇಡಿ ಪ್ರಶಿಕ್ಷಣಾರ್ಥಿಗಳು ವಿಸ್ತಾರವಾದ ಜ್ಞಾನ ಮತ್ತು ಕಲಿಕೆಯ ಜೊತೆಗೆ ಶಿಷ್ಟಾಚಾರ ಕ್ರಮಗಳನ್ನು ರೂಢಿಸಿಕೊಳ್ಳಬೇಕು’ ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ ಅವರು ಶಿಕ್ಷಣ ಇಲಾಖೆಯ ಸಮಗ್ರ ಕಾರ್ಯ ಚಟುವಟಿಕೆಗಳು, ಯೋಜನೆಗಳು, ವಿವಿಧ ಸ್ತರದ ಆಡಳಿತ ವ್ಯವಸ್ಥೆಯ ಸಮಗ್ರ ಚಿತ್ರಣವನ್ನು ವಿದ್ಯಾರ್ಥಿಗಳಿಗೆ ನೀಡಿದರು.

ADVERTISEMENT

ಬಿ.ಆರ್.ಸಿ. ಭಗವಂತರಾಯ, ದೈಹಿಕ ಶಿಕ್ಷಣ ನಿರ್ದೇಶಕ ಇಚ್ಚಂಗಿ, ಶಿಕ್ಷಣಾಧಿಕಾರಿ ಮಂಜುನಾಥ, ಸಿದ್ದರಾಜ, ನಾಗರಾಜ, ಟಿ.ಎಂ.ಇ.ಎ. ಕಾಲೇಜು ಪ್ರಾಚಾರ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.