ADVERTISEMENT

ಹನುಮನಮಟ್ಟಿ: ವಿಶ್ವ ಮಣ್ಣು ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2023, 7:36 IST
Last Updated 7 ಡಿಸೆಂಬರ್ 2023, 7:36 IST
ರಾಣೆಬೆನ್ನೂರು ತಾಲ್ಲೂಕಿನ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಮಣ್ಣು ದಿನಾಚರಣೆ ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಹಾಗೂ ಹಿರಿಯ ವಿಜ್ಞಾನಿ ಡಾ.ಗುರುಪ್ರಸಾದ ರೈತರಿಗೆ ಆರೋಗ್ಯ ಚೀಟಿಯನ್ನು ವಿತರಿಸಿದರು
ರಾಣೆಬೆನ್ನೂರು ತಾಲ್ಲೂಕಿನ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಮಣ್ಣು ದಿನಾಚರಣೆ ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಹಾಗೂ ಹಿರಿಯ ವಿಜ್ಞಾನಿ ಡಾ.ಗುರುಪ್ರಸಾದ ರೈತರಿಗೆ ಆರೋಗ್ಯ ಚೀಟಿಯನ್ನು ವಿತರಿಸಿದರು    

ರಾಣೆಬೆನ್ನೂರು: ಮಣ್ಣು ಮತ್ತು ನೀರು ಸಂರಕ್ಷಣೆ ಜೊತೆಗೆ ಕೃಷಿ ಭೂಮಿಯ ಫಲವತ್ತತೆ ಕಾಪಾಡುವ ಅವಶ್ಯವಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಹಾಗೂ ಹಿರಿಯ ವಿಜ್ಞಾನಿ ಡಾ.ಗುರುಪ್ರಸಾದ ಹೇಳಿದರು.

ತಾಲ್ಲೂಕಿನ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಕೃಷಿ ವಿಜ್ಞಾನ ಕೇಂದ್ರ ಹನುಮನಮಟ್ಟಿ, ಎಂಸಿಎಫ್‌ಎಫ್‌ ಹಾವೇರಿ, ವನಸಿರಿ ಸಂಸ್ಥೆ ಆಶ್ರಯದಲ್ಲಿ ಈಚೆಗೆ ನಡೆದ ವಿಶ್ವ ಮಣ್ಣು ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಬಾರ್ಡ್‌ ಜಿಲ್ಲಾ ಪ್ರಬಂಧಕ ರಂಗನಾಥ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಣ್ಣು ಮತ್ತು ನೀರು ಈ ಭೂಮಿ ಮೇಲೆ ಇರುವ ಜೀವಿಗಳಿಗೆ ಅವಶ್ಯ. ನಬಾರ್ಡ್‌ ಬ್ಯಾಂಕ್‌ನಿಂದ ರೈತರಿಗೆ ದೊರಕುವ ಸೌಲಭ್ಯಗಳ ಬಗ್ಗೆ ತಿಳಿಸಿದರು.

ADVERTISEMENT

ಕೃಷ್ಣ ನಾಯಕ ಅವರು ಮಣ್ಣಿನ ಮಾದರಿಯ ಬಗ್ಗೆ ವಿವರಿಸಿದರು.

ದೇವರಾಜ ಕೋರಿ, ವನಸಿರಿ ಸಂಸ್ಥೆಯ ಎಸ್‌.ಡಿ.ಬಳಿಗಾರ, ದಿಳ್ಳೆಪ್ಪ ಕಂಬಳಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ರೈತರಿಗೆ ಆರೋಗ್ಯ ಚೀಟಿಯನ್ನು ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.