ಹಾವೇರಿ: ಮಂಗಳವಾರ ಮಧ್ಯರಾತ್ರಿ 2.30ರ ಸಮಯದಲ್ಲಿ ಮನೆಯ ಗೋಡೆ ಕುಸಿದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಶಿಗ್ಗಾವಿ ತಾಲ್ಲೂಕಿನ ಕುನ್ನೂರ ಗ್ರಾಮದ ಪ್ಲಾಟ್ ನಲ್ಲಿ ಜರುಗಿದೆ.
ಮುಸ್ತಾಕ ಶರೀಫ್ ಸಾಬ್ ಯರಗುಪ್ಪಿ (27) ಮೃತಪಟ್ಟ ದುರ್ದೈವಿ.
ತೀವ್ರ ಗಾಯಗೊಂಡ ಯುವಕನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಮನೆ ತೀವ್ರ ಶಿಥಿಲಗೊಂಡಿದ್ದರಿಂದ ಗೋಡೆ ಕುಸಿದಿದೆ. ಕೆಲ ದಿನಗಳ ಹಿಂದಷ್ಟೇ ಹೆರಿಗೆಯಾಗಿದ್ದ ಪತ್ನಿ, ಮಗು, ಕುಟುಂಬದವರು ಅಪಾಯದಿಂದ ಪಾರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.