ADVERTISEMENT

ಅಧಿಕಾರ ಕಿತ್ತಾಟದಲ್ಲಿ ಅಭಿವೃದ್ಧಿ ಶೂನ್ಯ: ಮಾಜಿ ಸಚಿವ ಬಿ.ಸಿ.ಪಾಟೀಲ ಆರೋಪ

​ಪ್ರಜಾವಾಣಿ ವಾರ್ತೆ
Published 23 ಜನವರಿ 2026, 8:36 IST
Last Updated 23 ಜನವರಿ 2026, 8:36 IST
ರಟ್ಟೀಹಳ್ಳಿ ಪಟ್ಟಣದಲ್ಲಿ ಮಂಗಳವಾರ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಮಾಜಿ ಕೃಷಿ ಸಚಿವ ಬಿ.ಸಿ.ಪಾಟೀಲ ನಡೆಸಿದರು. ಬಿಜೆಪಿ ಮುಖಂಡರು, ಕಾರ್ಯಕರ್ತರು ಇದ್ದರು
ರಟ್ಟೀಹಳ್ಳಿ ಪಟ್ಟಣದಲ್ಲಿ ಮಂಗಳವಾರ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಮಾಜಿ ಕೃಷಿ ಸಚಿವ ಬಿ.ಸಿ.ಪಾಟೀಲ ನಡೆಸಿದರು. ಬಿಜೆಪಿ ಮುಖಂಡರು, ಕಾರ್ಯಕರ್ತರು ಇದ್ದರು   

ರಟ್ಟೀಹಳ್ಳಿ: ರಾಜ್ಯದ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಅಭಿವೃದ್ಧಿ ಶೂನ್ಯವಾಗಿದೆ. ಹಿಂದಿನ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾಮಗಾರಿಗೆ ತೇಪೆಹಚ್ಚಿ ತಾವೇ ಮಾಡಿರುವುದಾಗಿ ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಕೃಷಿ ಸಚಿವ ಬಿ.ಸಿ.ಪಾಟೀಲ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದರು.

ಅವರು ಮಂಗಳವಾರ ಪಟ್ಟಣದ ಪ್ರವಾಸಿಮಂದಿರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದರು.

ಅಧಿಕಾರ ಕಿತ್ತಾಟದಲ್ಲಿ ರಾಜ್ಯದ ಸಚಿವರು ನಿರತರಾಗಿದ್ದು, ಜನತೆಯ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ವಿಬಿ ಜೀ ರಾಮ ಜೀ ವಿಚಾರವನ್ನು ಪ್ರಸ್ತಾಪ ಮಾಡುತ್ತಾ ಕೇಂದ್ರ ಸರ್ಕಾರದ ವಿರುದ್ಧ ಗೂಬೆಕೂಡಿಸುವ ಕೆಲಸ ಮಾಡುತ್ತಿದ್ದಾರೆ. ಮಹಾತ್ಮಾ ಗಾಂಧಿ ಕಾಂಗ್ರೆಸ್ ಸ್ವತ್ತಲ್ಲ, ಅವರು ಇಡೀ ದೇಶದ ಸ್ವತ್ತು, ಮನರೇಗಾ ಯೋಜನೆ ಇದೀಗ ವಿಬಿ ಜೀ ರಾಮ ಜೀ ಅಂತಾ ಬದಲಾಗಿದ್ದು, ಕಾರ್ಮಿಕ ವರ್ಗದವರಿಗೆ ಇನ್ನೂ ಹೆಚ್ಚಿನ ಅನುಕೂಲವಾಗಲಿದೆ. ಕಾರ್ಮಿಕರ ಕೂಲಿ ದಿನಗಳನ್ನು 100 ದಿನದಿಂದ 125 ದಿನಕ್ಕೆ ಏರಿಸಲಾಗಿದೆ. ಇದಕ್ಕೆ ಕೇಂದ್ರ ಸರ್ಕಾರ ಶೇ 60 ಹಾಗೂ ರಾಜ್ಯ ಸರ್ಕಾರ ಶೇ 40 ರಷ್ಟು ಅನುದಾನ ನೀಡುತ್ತ ಬರುತ್ತಿದ್ದು, ರಾಜ್ಯ ಸರ್ಕಾರ ಶೇ 40 ಅನುದಾನ ಬರಿಸಲು ಶಕ್ತವಿಲ್ಲದಂತಾಗಿದೆ. ಚುನಾವಣಾ ಆಯೋಗದ ಎಸ್ಐಆರ್ ಪ್ರಕ್ರಿಯೆ ಜಾರಿಯಲ್ಲಿದ್ದು, ನಮ್ಮ ಕಾರ್ಯಕರ್ತರು ಬೂತ್‌ಮಟ್ಟದಲ್ಲಿ ವಲಸೆ, ಮರಣ ಹೊಂದಿದವರ ಮಾಹಿತಿ ಪಡೆಯಬೇಕು. ಹೊಸ ಮತದಾರರ ಸೇರ್ಪಡೆ ಬಗ್ಗೆ ಬಿಎಲ್ಎಗಳಿಗೆ ಮಾಹಿಸಿ ನೀಡಬೇಕು ಎಂದು ತಿಳಿಸಿದರು.

ADVERTISEMENT

ಬಿಜೆಪಿ ತಾಲ್ಲೂಕು ಅಧ್ಯಕ್ಷ ದೇವರಾಜ ನಾಗಣ್ಣನವರ, ಮುಖಂಡರಾದ ಆರ್.ಎನ್.ಗಂಗೋಳ, ರಾಘವೇಂದ್ರ ಹರವಿಶೆಟ್ಟರ, ನಾಗರಾಜ ದ್ಯಾವಕ್ಕಳವರ, ಸಂದೀಪ ಪಾಟೀಲ, ರವಿಶಂಕರ ಬಾಳಿಕಾಯಿ, ಹನುಮಂತಪ್ಪ ಗಾಜೇರ, ವೀರನಗೌಡ ಮಕರಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.