ADVERTISEMENT

ಜಿ.ಪಂ.ಅಧ್ಯಕ್ಷ ಸ್ಥಾನದ ಚುನಾವಣೆ ಅ.22ರಂದು

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2020, 15:33 IST
Last Updated 15 ಅಕ್ಟೋಬರ್ 2020, 15:33 IST
ಹಾವೇರಿ ಜಿಲ್ಲಾ ಪಂಚಾಯಿತಿ ಕಾರ್ಯಾಲಯ
ಹಾವೇರಿ ಜಿಲ್ಲಾ ಪಂಚಾಯಿತಿ ಕಾರ್ಯಾಲಯ   

ಹಾವೇರಿ: ಜಿಲ್ಲಾ ಪಂಚಾಯಿತಿ ನೂತನ ಅಧ್ಯಕ್ಷರ ಆಯ್ಕೆಗಾಗಿ ಅ.22ರಂದು ಜಿಲ್ಲಾ ಪಂಚಾಯಿತಿ ಕಾರ್ಯಾಲಯದ ಸಭಾಭವನದಲ್ಲಿ ಚುನಾವಣೆ ಜರುಗಲಿದೆ ಎಂದು ಬೆಳಗಾವಿ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಆದೇಶ ಹೊರಡಿಸಿದ್ದಾರೆ.

ಹಾವೇರಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಸ್ಥಾನವನ್ನು ಸಾಮಾನ್ಯ ವರ್ಗಕ್ಕೆ ಮೀಸಲಿಡಲಾಗಿದೆ. ಜಿ.ಪಂ. ಅಧ್ಯಕ್ಷರಾಗಿದ್ದ ಬಸವನಗೌಡ ದೇಸಾಯಿ ಅವರ ನಿಧನದಿಂದ ಖಾಲಿ ಉಳಿದ ಜಿ.ಪಂ. ಅಧ್ಯಕ್ಷರ ಹುದ್ದೆಯ ಉಳಿದ ಅವಧಿಗೆ ಚುನಾವಣೆ ನಡೆಯಲಿದೆ.

ಚುನಾವಣೆ ಸಭೆಗೆ ಗೊತ್ತುಪಡಿಸಿದ ಅವಧಿಯ ಎರಡು ಗಂಟೆಗಳಿಗಿಂತ ಕಡಿಮೆ ಇಲ್ಲದಂತೆ (ಅ.22ರ ಮದ್ಯಾಹ್ನ 1 ಗಂಟೆವರೆಗೆ) ಮುಂಚಿತವಾಗಿ ಯಾರೇ ಸದಸ್ಯರು, ನಮೂನೆ-1ರಲ್ಲಿ ನಾಮ ನಿರ್ದೇಶನ ಪತ್ರವನ್ನು ಬೆಳಗಾವಿ ಪ್ರಾದೇಶಿಕ ಆಯುಕ್ತರು ಅಥವಾ ಅವರಿಂದ ಅಧಿಕೃತಗೊಳಿಸಲಾದ ಅಧಿಕಾರಿಯಾದ ಹೆಚ್ಚುವರಿ ಜಿಲ್ಲಾಧಿಕಾರಿಗೆ ಸಲ್ಲಿಸಬಹುದು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.