ADVERTISEMENT

ಪ್ರಾದೇಶಿಕ ನಿರ್ದೇಶಕ ಹೇಮಚಂದ್ರ ಅಮಾನತು

ತೆಂಗು ಅಭಿವೃದ್ಧಿ ಮಂಡಳಿಯಲ್ಲಿ ₹ 5.08 ಕೋಟಿ ದುರ್ಬಳಕೆ ಆರೋಪ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2019, 20:10 IST
Last Updated 10 ಏಪ್ರಿಲ್ 2019, 20:10 IST

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದ ರೈತರ ನೆರವಿಗಾಗಿ ‘ತೆಂಗು ಅಭಿವೃದ್ಧಿ ಮಂಡಳಿ’ಗೆ ಕೇಂದ್ರ ಸರ್ಕಾರ 2016–17ನೇ ಸಾಲಿಗೆ ಬಿಡುಗಡೆ ಮಾಡಿದ್ದ ₹ 5.08 ಕೋಟಿ ದುರ್ಬಳಕೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ಎಫ್‌ಐಆರ್‌ದಾಖಲಿಸಿದೆ.

ಈ ಸಂಬಂಧ ತೆಂಗು ಅಭಿವೃದ್ಧಿ ಮಂಡಳಿಯ ಪ್ರಾದೇಶಿಕ ನಿರ್ದೇಶಕ ಹೇಮಚಂದ್ರ ಮತ್ತು ತಾಂತ್ರಿಕ ಅಧಿಕಾರಿ ಸಿಮಿ ಥಾಮಸ್‌ ಅವರನ್ನು ಅಮಾನತುಗೊಳಿಸಲಾಗಿದೆ. ತೆಂಗು ಉತ್ಪಾದನೆ ಪ್ರೋತ್ಸಾಹಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ನೆರವು ನೀಡಲು ಈ ಹಣ ಬಿಡುಗಡೆ ಮಾಡಲಾಗಿತ್ತು.

ತೆಂಗು ಅಭಿವೃದ್ಧಿ ಮಂಡಳಿ ಅಧಿಕಾರಿಗಳು ಈ ಹಣದಿಂದ ತೋಟಗಾರಿಕೆ ಉಪಕರಣಗಳನ್ನು ಖರೀದಿಸಿದ್ದರು. ಅನಧಿಕೃತ ವಿತರಕರಿಂದ ಖರೀದಿಸಿದ್ದ ಉಪಕರಣಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸದೆ, ನಕಲಿ ದಾಖಲೆ ಸೃಷ್ಟಿಸಿದ್ದರು. ಈ ಸಂಬಂಧ ಸಿಬಿಐ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಲಾಗಿತ್ತು. ಆರೋಪಿಗಳು ಭಾರತ ದಂಡಸಂಹಿತೆ ಹಾಗೂ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಅಪರಾಧ ಎಸಗಿದ್ದು ತನಿಖೆಯಿಂದ ಖಚಿತವಾಗಿದೆ. ಪ್ರಕರಣದಲ್ಲಿ ಇನ್ನೂ ಕೆಲವು ಅಧಿಕಾರಿಗಳು ಭಾಗಿಯಾಗಿರುವುದು ಕಂಡುಬಂದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.