ADVERTISEMENT

‘ಬಿಬಿಎಂಪಿ ಆಯುಕ್ತರನ್ನೂ ಪ್ರತಿವಾದಿಯಾಗಿ ಸೇರ್ಪಡೆ ಮಾಡಿ’

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2019, 19:54 IST
Last Updated 10 ಏಪ್ರಿಲ್ 2019, 19:54 IST

ಬೆಂಗಳೂರು: ಸರಕು ಸಾಗಾಣಿಕೆ ವಾಹಗಳಲ್ಲಿ ವಿದ್ಯಾರ್ಥಿಗಳು, ಮಕ್ಕಳು, ಕಾರ್ಮಿಕರು ಸೇರಿದಂತೆ ಪ್ರಯಾಣಿಕರನ್ನು ಕೊಂಡೊಯ್ಯುವುದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತರನ್ನೂ ಪ್ರತಿವಾದಿಯನ್ನಾಗಿ ಮಾಡುವಂತೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತಂತೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಂಚಾಟೆ ಸಂಜೀವ ಕುಮಾರ್ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ಬಿಬಿಎಂಪಿ ಆಯುಕ್ತರ ಸೇರ್ಪಡೆ ಮಾಡಲು ಅರ್ಜಿದಾರರಿಗೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಇದೇ 22ಕ್ಕೆ ಮುಂದೂಡಿದೆ.

ಸರಕು ಸಾಗಾಣಿಕೆ ವಾಹನಗಳಲ್ಲಿ ಪ್ರಯಾಣಿಕರ ಸಂಚಾರ ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ಅರ್ಜಿದಾರರ ಕೋರಿಕೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.