ADVERTISEMENT

ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಸಿದ್ಧಾರೂಢರ ಹೆಸರು ನಾಮಕರಣ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2020, 10:22 IST
Last Updated 9 ಸೆಪ್ಟೆಂಬರ್ 2020, 10:22 IST
ಹುಬ್ಬಳ್ಳಿ ರೈಲ್ವೆ ನಿಲ್ದಾಣ
ಹುಬ್ಬಳ್ಳಿ ರೈಲ್ವೆ ನಿಲ್ದಾಣ   

ಹುಬ್ಬಳ್ಳಿ: ನಗರದ ರೈಲು ನಿಲ್ದಾಣಕ್ಕೆ ಈ ಭಾಗದ ಜನರ ಆರಾಧ್ಯ ದೈವ ಸಿದ್ಧಾರೂಢ ಸ್ವಾಮೀಜಿ ಅವರ ಹೆಸರು ನಾಮಕರಣ ಮಾಡಬೇಕು ಎನ್ನುವ ಬೇಡಿಕೆಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ.

ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಈ ಕುರಿತು ಟ್ವಿಟ್ ಮಾಡಿದ್ದು, ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಸಿದ್ಧಾರೂಢ ಸ್ವಾಮೀಜಿ‌ ಎಂದು ನಾಮಕರಣ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಗೃಹ ಸಚಿವ ಅಮಿತ್ ಶಾ ಹಾಗೂ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಧನ್ಯವಾದ ಎಂದು ಬರೆದಿದ್ದಾರೆ.

ನಮ್ಮೆಲ್ಲರ ಆರಾಧ್ಯ ದೈವ ಸದ್ಗುರು ಶ್ರೀ ಸಿದ್ಧಾರೂಢ ಸ್ವಾಮೀಜಿ ಅವರ ಆಶೀರ್ವಾದದಿಂದ ಹುಬ್ಬಳ್ಳಿ ಜನರ ಬಹಳ ದಿನದ ಬೇಡಿಕೆಯಂತೆ ಹುಬ್ಬಳ್ಳಿಯ ರೈಲ್ವೆ ನಿಲ್ದಾಣಕ್ಕೆ ಶ್ರೀ ಸಿದ್ಧಾರೂಡ ಸ್ವಾಮೀಜಿ ರೈಲ್ವೆ ನಿಲ್ದಾಣವೆಂದು ನಾಮಕರಣ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ನಾನು ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಪಿಯೂಷ್ ಗೋಯಲ್ ಮತ್ತು ಸುರೇಶ ಅಂಗಡಿ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಫೇಸ್‌ಬುಕ್‌ನಲ್ಲಿಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ‌.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.