ADVERTISEMENT

ಅಪಘಾತ: ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 18 ಜೂನ್ 2018, 5:32 IST
Last Updated 18 ಜೂನ್ 2018, 5:32 IST

ಕಲಬುರ್ಗಿ: ಜೇವರ್ಗಿ ಬಸ್ ಡಿಪೋ ಎದುರು ಬಸ್ ಮತ್ತು ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಜೇವರ್ಗಿ ತಾಲ್ಲೂಕು ಆಂದೋಲಾ ಗ್ರಾಮದ ರಾಜು ರದ್ದೆವಾಡಗಿ (30) ಮೃತಪಟ್ಟವರು.

ಬಸ್ ಬೀದರ್ ಜಿಲ್ಲೆ ಹುಮನಾಬಾದ್‌ನಿಂದ ಹುಬ್ಬಳ್ಳಿಗೆ ತೆರಳುತ್ತಿತ್ತು. ಮೃತ ರಾಜು ಸಂಬಂಧಿಕರ ಮದುವೆಗೆ ಹೊರಟಿದ್ದರು.

ADVERTISEMENT

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದರು. ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.