ADVERTISEMENT

‘ಕಾಂಗ್ರೆಸ್‌ನಲ್ಲಿ ಮಹಿಳೆಯರಿಗೆ ಅವಕಾಶ’

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2017, 7:00 IST
Last Updated 28 ಅಕ್ಟೋಬರ್ 2017, 7:00 IST

ಕಲಬುರ್ಗಿ: ‘ಮಹಿಳೆಯರಿಗೆ ಹೆಚ್ಚು ಮೀಸಲಾತಿ ಕಲ್ಪಿಸಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ. ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ರಾಜಕೀಯ ಪ್ರಾತಿನಿಧ್ಯ ಪಡೆಯಬೇಕು’ ಎಂದು ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಪ್ರಭಾವತಿ ಡಿ.ಪಾಟೀಲ ಹೇಳಿದರು.

ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಮಹಿಳಾ ಘಟಕದ ವತಿಯಿಂದ ಏರ್ಪಡಿಸಿದ್ದ ಅರಿಶಿಣ–ಕುಂಕುಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕೆಪಿಸಿಸಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಿಕಾ ಪರಮೇಶ್ವರ, ಮಹಿಳಾ ಘಟಕದ ವಾಣಿಶ್ರೀ ಸಗರಕರ್‌, ರೇಣುಕಾ ಚವಾಣ್‌, ಅಹ್ಮದಿ ಬೇಗಂ, ಅಯಿಶಾ ಶಿಖಾರಿ, ಸರೋಜಾ ಕುಮಸಿ, ನಂದಾ ರೆಡ್ಡಿ, ಶೋಭಾ ಕಾಳೆ, ಜಗದೇವಿ ಚವಾಣ್‌, ರಮಾಬಾಯಿ ಗಾಯಕವಾಡ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT