ADVERTISEMENT

ಕೇಂದ್ರೀಯ ವಿವಿ: ಉರ್ದು ವಿಭಾಗ ಪ್ರಾರಂಭಕ್ಕೆ ಮನವಿ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2017, 6:59 IST
Last Updated 25 ಅಕ್ಟೋಬರ್ 2017, 6:59 IST

ಕಲಬುರ್ಗಿ: ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉರ್ದು ವಿಭಾಗ ಆರಂಭಿಸುವಂತೆ ಕುಲಪತಿ ಪ್ರೊ.ಎಚ್‌.ಎಂ.ಮಹೇಶ್ವರಯ್ಯ ಅವರಿಗೆ ಶ್ರಮಜೀವಿಗಳ ವೇದಿಕೆ ನೇತೃತ್ವದ ಮುಸ್ಲಿಂ ಮುಖಂಡರ ನಿಯೋಗವು ಸೋಮವಾರ ಮನವಿ ಸಲ್ಲಿಸಿತು.

ವೇದಿಕೆಯ ಅಧ್ಯಕ್ಷ ಚಂದ್ರಶೇಖರ ಹಿರೇಮಠ ಮಾತನಾಡಿ, ‘ಜಿಲ್ಲೆಯಲ್ಲಿ ಉರ್ದು ಭಾಷಿಕರ ಸಂಖ್ಯೆ ಅಧಿಕವಾಗಿದೆ. ಅನೇಕ ಶಾಲೆ, ಕಾಲೇಜುಗಳಲ್ಲಿ ಉರ್ದು ಮಾಧ್ಯಮದಲ್ಲಿ ಶಿಕ್ಷಣ ಪಡೆಯುವ ಸಾಕಷ್ಟು ವಿದ್ಯಾರ್ಥಿಗಳಿದ್ದಾರೆ. ಉರ್ದು ವಿಭಾಗ ತೆರೆಯುವುದರಿಂದ ವಿ.ವಿಯ ಬೆಳವಣಿಗೆಗೂ ಸಹಾಯವಾಗಲಿದೆ’ ಎಂದು ತಿಳಿಸಿದರು.

‘ಸೂಫಿ ಸಂತರಾದ ಖಾಜಾ ಬಂದಾ ಜವಾಜ್‌ ಹಾಗೂ ಆಳಂದದ ಲಾಡ್ಲೆ ಮಶಾಕ ಅವರ ಹೆಸರಿನಲ್ಲಿ ಅಧ್ಯಯನ ಪೀಠ ಹಾಗೂ ಸಂಶೋಧನಾ ಕೇಂದ್ರಗಳನ್ನು ಪ್ರಾರಂಭಿಸಬೇಕು’ ಎಂದು ಮನವಿ ಮಾಡಲಾಯಿತು.

ADVERTISEMENT

ಕುಲಪತಿ ಪ್ರೊ.ಎಚ್‌.ಎಂ.ಮಹೇಶ್ವರಯ್ಯ ಪ್ರತಿಕ್ರಿಯಿಸಿ, ಈ ಸಂಬಂಧ ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆಗೆ ಪತ್ರ ಬರೆಯಲಾಗುವುದು ಹಾಗೂ ಉರ್ದು ವಿಭಾಗ ಆರಂಭಿಸಲು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು. ಮುಖಂಡರಾದ ಸಾದಿಕ್ ಅನ್ಸಾರಿ, ಫರೀದ್‌ ಅನ್ಸಾರಿ, ಮಹ್ಮದ್ ಜಾಕಿ, ಅಕ್ಬರ್ ಖಾಸಿಂ, ಶೇಖ್‌ ಮುಜಿಂ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.