ADVERTISEMENT

ಜಾಗೃತಿ: ಬಸ್, ಆಟೊ ಮೇಲೆ ಪೋಸ್ಟರ್

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2018, 11:45 IST
Last Updated 29 ಏಪ್ರಿಲ್ 2018, 11:45 IST

ಕಲಬುರ್ಗಿ: ಜಿಲ್ಲಾ ಸ್ವೀಪ್ ಸಮಿತಿಯಿಂದ ಶನಿವಾರ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಇಕೆಆರ್‌ಟಿಸಿ) ಬಸ್‌ ಹಾಗೂ ಆಟೊಗಳ ಮೇಲೆ ಮತದಾನ ಜಾಗೃತಿಯ ಪೋಸ್ಟರ್‌ಗಳನ್ನು ಅಳವಡಿಸಲಾಯಿತು.

ಸ್ವೀಪ್ ಸಮಿತಿ ಅಧ್ಯಕ್ಷೆ ಹೆಪ್ಸಿಬಾರಾಣಿ ಕೊರ್ಲಪಾಟಿ ಅವರು ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್‌ಗಳಿಗೆ ಪೋಸ್ಟರ್ ಅಂಟಿಸುವ ಮೂಲಕ ಪೋಸ್ಟರ್ ಅಳವಡಿಕೆಗೆ ಚಾಲನೆ ನೀಡಿದರು.

ಕೇಂದ್ರ ಬಸ್ ನಿಲ್ದಾಣದಿಂದ ಪ್ರತಿನಿತ್ಯ 1,400 ಬಸ್‌ಗಳು ಸಂಚರಿಸುತ್ತವೆ. ಪ್ರಯಾಣಿಕರ ಗಮನ ಸೆಳೆಯಲು ಎಲ್ಲಾ ಬಸ್‌ಗಳ ಹಿಂಬದಿಯಲ್ಲಿ ಹಾಗೂ ಬಸ್‌ನ ಪ್ರವೇಶದ್ವಾರದಲ್ಲಿ ಪೋಸ್ಟರ್‌ಗಳನ್ನು ಅಂಟಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ ಸುಮಾರು 2,500 ಪೋಸ್ಟರ್‌ಗಳನ್ನು ಸಾರಿಗೆ ಸಂಸ್ಥೆಗೆ ನೀಡಿದರು. ಇದೇ ರೀತಿ ನಗರದಲ್ಲಿರುವ ಸುಮಾರು 4,500 ಆಟೊಗಳ ಮೇಲೆ ಮತದಾನ ಜಾಗೃತಿ ಪೋಸ್ಟರ್ ಅಂಟಿಸಲು ಕ್ರಮಕೈಗೊಳ್ಳುವಂತೆ ಸ್ವೀಪ್ ಸಿಬ್ಬಂದಿಗೆ ಸೂಚಿಸಿದರು.

ADVERTISEMENT

ಮತದಾನದ ಜಾಗೃತಿ: ಜಿಲ್ಲಾ ಪಂಚಾಯಿತಿ ವತಿಯಿಂದ ಸಿಟಿ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹಾಗೂ ಸೂಪರ್ ಮಾರ್ಕೆಟ್‌ ವ್ಯಾಪಾರಿಗಳಿಗೆ ಕಡ್ಡಾಯ ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.