ADVERTISEMENT

ಟಿಪ್ಪು ಜಯಂತಿಗೆ ವಿರೋಧ: ಆಕ್ರೋಶ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2017, 7:13 IST
Last Updated 29 ಅಕ್ಟೋಬರ್ 2017, 7:13 IST
ಕಲಬುರ್ಗಿಲ್ಲಿ ಶನಿವಾರ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಪ್ರತಿಕೃತಿ ದಹಿಸಿದರು
ಕಲಬುರ್ಗಿಲ್ಲಿ ಶನಿವಾರ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಪ್ರತಿಕೃತಿ ದಹಿಸಿದರು   

ಕಲಬುರ್ಗಿ: ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಯಡಿಯೂರಪ್ಪ, ಜಗದೀಶ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಆರ್.ಅಶೋಕ ಹಾಗೂ ಶೋಭಾ ಕರಂದ್ಲಾಜೆ ಅವರು ತಮ್ಮ ಸರ್ಕಾರದ ಅವಧಿಯಲ್ಲಿ ಟಿಪ್ಪುವಿನ ವೇಷಭೂಷಣ ಧರಿಸಿ ಹಾಡಿಹೊಗಳಿದ್ದಾರೆ. ಆದರೆ ಈಗ ಕಾಂಗ್ರೆಸ್ ಸರ್ಕಾರ ಆಚರಿಸುತ್ತಿರುವ ಟಿಪ್ಪು ಜಯಂತಿಯನ್ನು ವಿರೋಧಿಸುತ್ತಿದ್ದಾರೆ.

ಈ ಮೂಲಕ ಸಮಾಜದಲ್ಲಿ ಕೋಮು ಸಾಮರಸ್ಯ ಕದಡುವ ಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಈರಣ್ಣ ಪಾಟೀಲ ಝಳಕಿ ನೇತೃತ್ವ ವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.