ADVERTISEMENT

ನೀರು ಪೂರೈಕೆಗೆ ಒತ್ತಾಯ: ರಸ್ತೆತಡೆ

ಖಾಲಿ ಕೊಡ ಹಿಡಿದು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2018, 10:24 IST
Last Updated 31 ಮಾರ್ಚ್ 2018, 10:24 IST

ಕಲಬುರ್ಗಿ: ವಾರ್ಡ್ ನಂ.45ಗೆ ಹಲವು ದಿನಗಳಿಂದ ಕುಡಿಯುವ ನೀರು ಪೂರೈಕೆಯಾಗಿಲ್ಲ ಎಂದು ಆರೋಪಿಸಿ ನಿವಾಸಿಗಳು ಇಲ್ಲಿನ ಸೇಡಂ ರಸ್ತೆಯಲ್ಲು ಶುಕ್ರವಾರ ಖಾಲಿ ಕೊಡಗಳೊಂದಿಗೆ ರಸ್ತೆ ತಡೆ
ನಡೆಸಿದರು.

‘ಬೇಸಿಗೆ ಆರಂಭದಲ್ಲಿಯೇ ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದೆ. ಕುಡಿಯುವ ನೀರನ್ನು ಸಮರ್ಪಕವಾಗಿ ಪೂರೈಸಬೇಕು. ಇಲ್ಲದಿದ್ದರೆ ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.ಪ್ರತಿಭಟನೆಯಿಂದಾಗಿ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ಕೆಲಕಾಲ ಅಸ್ತವ್ಯಸ್ತಗೊಂಡಿತು. ಪೊಲೀಸರ ಮಧ್ಯೆ ಪ್ರವೇಶಿಸಿ ಪ್ರತಿಭಟನಾಕಾರರ ಮನವೊಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT