ADVERTISEMENT

ಪ್ರಾಂಶುಪಾಲರ ಬಂಧನ, ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2018, 10:41 IST
Last Updated 13 ಮಾರ್ಚ್ 2018, 10:41 IST

ಕಲಬುರ್ಗಿ: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಸರಿ ಉತ್ತರ ಬರೆಯಲು ನೆರವಾಗುತ್ತಿದ್ದ ಆರೋಪದ ಮೇಲೆ ಇಲ್ಲಿನ ನ್ಯಾಷನಲ್ ಕಾಲೇಜು ಪ್ರಾಂಶುಪಾಲರನ್ನು ಪೊಲೀಸರು ಸೋಮವಾರ ಬಂಧಿಸಿ, ಬಿಡುಗಡೆ ಮಾಡಿದರು.

‘ಪ್ರಾಂಶುಪಾಲರಾದ ರೆಹನಾ ಬೇಗಂ ಅವರು ಹಣ ಕೊಟ್ಟ ಅಭ್ಯರ್ಥಿಗಳಿಗೆ ಸರಿ ಉತ್ತರ ಬರೆಯಲು ನೆರವಾಗುತ್ತಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ಅವರು ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದ ಕಾರಣ ಅವರಿಂದ ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT