ADVERTISEMENT

ಸಂಪೂರ್ಣ ಸಾಲ ಮನ್ನಾಕ್ಕೆ ಒತ್ತಾಯ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ; ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸರಣಿ ಪ‍್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2018, 6:58 IST
Last Updated 19 ಜೂನ್ 2018, 6:58 IST
ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯರು ಕಲಬುರ್ಗಿಯಲ್ಲಿ ಸೋಮವಾರ ಪ್ರತಿಭಟನೆ ಮಾಡಿದರು
ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯರು ಕಲಬುರ್ಗಿಯಲ್ಲಿ ಸೋಮವಾರ ಪ್ರತಿಭಟನೆ ಮಾಡಿದರು   

ಕಲಬುರ್ಗಿ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ರಾಜ್ಯದ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ಮಾಡಿದರು.

ಸಹಕಾರ, ಖಾಸಗಿ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಸಂಪೂರ್ಣ ಸಾಲವನ್ನು 24 ಗಂಟೆಯೊಳಗೆ ಮನ್ನಾ ಮಾಡಲಾಗುವುದು ಎಂದು ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದರು. ಆದರೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ತಿಂಗಳಾಗುತ್ತ ಬಂದರೂ ಈ ಬಗ್ಗೆ ಕ್ರಮಕೈಗೊಂಡಿಲ್ಲ. ಕೂಡಲೇ ಸಾಲ ಮನ್ನಾ ಮಾಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಂಘದ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಸತ್ಯಂಪೇಟೆ, ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗರತ್ನಾ ಪಾಟೀಲ ಯಕ್ಷಿಂತಿ, ಅಂಬ್ರೇಶಗೌಡ ಬಳಬಟ್ಟಿ, ಮಂಜುಳಾ ಭಜಂತ್ರಿ, ನಾಗೇಂದ್ರಪ್ಪ ಆಳಂದ, ಜಗದೇವಿ ಹೆಗಡೆ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.