ADVERTISEMENT

ಹೆಗಡೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ: ಬಿ.ಆರ್‌.ಪಾಟೀಲ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2017, 6:53 IST
Last Updated 27 ಡಿಸೆಂಬರ್ 2017, 6:53 IST

ಕಲಬುರ್ಗಿ: ‘ಜಾತ್ಯತೀತರಿಗೆ ಅಪ್ಪ- ಅಮ್ಮ ಯಾರೆಂದು ಗೊತ್ತಿಲ್ಲ ಎಂದು ಹೇಳಿಕೆ ನೀಡಿರುವ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು' ಎಂದು ಆಳಂದ ಶಾಸಕ ಬಿ.ಆರ್.ಪಾಟೀಲ ತಿಳಿಸಿದರು.

‘ಈ ಸಂಬಂಧ ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಿದ್ದು, ಶೀಘ್ರದಲ್ಲಿಯೇ ಮೊಕದ್ದಮೆ ದಾಖಲು ಮಾಡಲಾಗುವುದು’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಸಚಿವರು ಸಂವಿಧಾನದ ಮೇಲೆ ಪ್ರಮಾಣ ಮಾಡಿ ಅಧಿಕಾರ ಸ್ವೀಕರಿಸಿದ್ದಾರೆ. ಆದರೆ, ಈಗ ಸಂವಿಧಾನ ಬದಲಾಯಿಸುವ ಮಾತು ಹೇಳುವ ಮೂಲಕ ಆ ಪ್ರತಿಜ್ಞಾವಿಧಿ ಉಲ್ಲಂಘಿಸಿದ್ದಾರೆ.

ADVERTISEMENT

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಸೂಚನೆಯ ಮೇರೆಗೆ ಸಚಿವರು ಇಂಥ ಹೇಳಿಕೆಗಳನ್ನು ನೀಡುತ್ತಿದ್ದಾರೆ’ ಎಂದು ಆಪಾದಿಸಿದರು.

‘ಸಂವಿಧಾನದ ಆಶಯವನ್ನು ಬುಡಮೇಲು ಮಾಡಲು ಆರ್‌ಎಸ್‌ಎಸ್‌ ಹಿಂದಿನಿಂದಲೂ ಹುನ್ನಾರ ನಡೆಸುತ್ತಿದೆ. ಈ ಹುನ್ನಾರದ ಭಾಗವಾಗಿಯೇ ಸಚಿವರು ಸಲ್ಲದ ಹೇಳಿಕೆ ನೀಡಿದ್ದಾರೆ’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.