ADVERTISEMENT

ಹೊರ ಗುತ್ತಿಗೆ ಆಧಾರಿತ ನೇಮಕಕ್ಕೆ ವಿರೋಧ

ಹೈದರಾಬಾದ್ ಕರ್ನಾಟಕ ಶುಶ್ರೂಷಕರ ಅಭಿವೃದ್ಧಿ ಸಂಘದ ಸದಸ್ಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2018, 4:40 IST
Last Updated 12 ಜೂನ್ 2018, 4:40 IST

ಕಲಬುರ್ಗಿ: ಗುಲಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್‌) ಆಸ್ಪತ್ರೆಯಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಶುಶ್ರೂಷಕರನ್ನು ನೇಮಕ ಮಾಡಿ ಕೊಳ್ಳುತ್ತಿರುವುದನ್ನು ಖಂಡಿಸಿ ಹೈದರಾಬಾದ್ ಕರ್ನಾಟಕ ಶುಶ್ರೂಷಕರ ಅಭಿವೃದ್ಧಿ ಸಂಘದ ಸದಸ್ಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ
ಎದುರು ಸೋಮವಾರ ಪ್ರತಿಭಟನೆ ಮಾಡಿದರು.

‘ಜಿಮ್ಸ್‌’ನಲ್ಲಿ ಶುಶ್ರೂಷಕರು ಸ್ಟಾಫ್ ನರ್ಸ್‌/ ಟ್ರೇನಿ/ ಗುತ್ತಿಗೆ/ ಸ್ಟೈಫಂಡರಿ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ. ವಿನಾಕಾರಣ ಸದ್ಯ ಕರ್ತವ್ಯ ನಿರ್ವಹಿಸುತ್ತಿರುವ ಶುಶ್ರೂಷಕರ ಸೇವೆಯನ್ನು ಬೇರ್ಪಡಿಸಿ, ಹೊರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಮುಂದಾಗಿರುವುದು ಖಂಡನೀಯ ಎಂದು ಪ್ರತಿಭಟನ ಆಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಮಿಕ ಇಲಾಖೆ ಈ ಬಗ್ಗೆ ಗಮನ ಹರಿಸಿ ಹೊರ ಗುತ್ತಿಗೆ ನೇಮಕವನ್ನು ಕೈಬಿಡುವಂತೆ ಸೂಚಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ADVERTISEMENT

ಹೈದರಾಬಾದ್ ಕರ್ನಾಟಕ ಶುಶ್ರೂಷಕರ ಅಭಿವೃದ್ಧಿ ಸಂಘದ ಸಂಸ್ಥಾಪಕ ಅಧ್ಯಕ್ಷ ನಟರಾಜ ಎ.ಕಿಣಗಿಕರ್, ಉಪಾಧ್ಯಕ್ಷ ಶರಣಪ್ಪ ಎಸ್.ಹಾವನೂರ, ಪ್ರಧಾನ ಕಾರ್ಯದರ್ಶಿ ಬಸಪ್ಪ ಜಡಿಗಾರ, ಜಿಲ್ಲಾ ಘಟಕದ ಅಧ್ಯಕ್ಷ ಸೂರ್ಯಕಾಂತ ಟಿ.ಮಾಹೂರಕರ್, ಜಿಲ್ಲಾ 
ಘಟಕದ ಉಪಾಧ್ಯಕ್ಷ ಮಲ್ಲಿಕಾರ್ಜುನ ಜಿ.ಮೈತ್ರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.