ಅಫಜಲಪುರ: ಮಹಾರಾಷ್ಟ್ರದ ಪುಣೆ ನಗರದ ಸುತ್ತಮುತ್ತ ಕಳೆದ ಒಂದು ವಾರದಿಂದ ಮಳೆಯಾಗುತ್ತಿರುವುದರಿಂದ ಉಜನಿ ಮತ್ತು ವೀರ್ ಜಲಾಶಯ ತುಂಬಿಕೊಂಡಿದ್ದು, ಹೆಚ್ಚಿನ ನೀರನ್ನು ನದಿಗೆ ಬಿಡಲಾಗುತ್ತಿದೆ.
1.45 ಲಕ್ಷ ಕ್ಯುಸೆಕ್ ನೀರು ನದಿಗೆ ಬಿಡುಗಡೆ ಮಾಡಿದ್ದು, ಮಂಗಳವಾರ ಬೆಳಿಗ್ಗೆ ನೀರು ಸೊನ್ನ ಬ್ಯಾರೇಜ್‌ಗೆ ಬಂದು ತಲುಪುತ್ತದೆ. ಹೀಗಾಗಿ ಸೊನ್ನ ಬ್ಯಾರೇಜ್‌ನಿಂದ ನದಿಗೆ 50 ಸಾವಿರ ಕ್ಯುಸೆಕ್ ನೀರು ಹರಿಸಲಾಗುತ್ತಿದೆ’ ಎಂದು ತಹಶೀಲ್ದಾರ್ ಸಂಜು ಕುಮಾರ್ ದಾಸರ್ ಹಾಗೂ ಭೀಮಾ ಏತ ನೀರಾವರಿ ಉಪ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಸಂತೋಷ್ ಕುಮಾರ್ ಸಜ್ಜನ್ ತಿಳಿಸಿದ್ದಾರೆ.
‘ಉಜನಿ ಮತ್ತು ವೀರ್ ಜಲಾಶಯದ ನೀರು ಬಂದ ನಂತರ ಸೊನ್ನ ಬ್ಯಾರೇಜ್‌ನಿಂದ ಇನ್ನೂ ಹೆಚ್ಚಿನ ಗೇಟ್‍ಗಳ ಮೂಲಕ ಭೀಮಾ ನದಿಗೆ ನೀರು ಹರಿಬಿಡಲಾಗುವುದು. ಆದ್ದರಿಂದ ಬ್ಯಾರೇಜ್ ಕೆಳಗಡೆ ಇರುವ ನದಿ ಪಾತ್ರದ ಜನರು ಹಾಗೂ ತಾಲ್ಲೂಕು, ಹೋಬಳಿ, ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಮುನ್ನಚ್ಚರಿಕೆ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.