ADVERTISEMENT

ಶತಕ ಮುಟ್ಟಿದ ಕೋವಿಡ್‌ನಿಂದ ಸತ್ತವರ ಸಂಖ್ಯೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2020, 8:02 IST
Last Updated 2 ಆಗಸ್ಟ್ 2020, 8:02 IST

ಕಲಬುರ್ಗಿ: ಕೋವಿಡ್‌ ಸೋಂಕಿನಿಂದ ನಗರದ ಮತ್ತೆ ಐವರು ನಿಧನರಾಗಿರುವ ಬಗ್ಗೆ ಶನಿವಾರ ದೃಢವಾಗಿದ್ದು, ಇದರಿಂದ ಸೋಂಕಿಗೆ ಜಿಲ್ಲೆಯಲ್ಲಿ ಈವರೆಗೆ ಮೃತರಾದವರ ಸಂಖ್ಯೆ 100ಕ್ಕೆ ಏರಿದೆ ಎಂದು ಜಿಲ್ಲಾಧಿಕಾರಿ ಬಿ. ಶರತ್ ತಿಳಿಸಿದ್ದಾರೆ.

ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹದಿಂದ ಬಳಲುತ್ತಿದ್ದ ಕಲಬುರ್ಗಿಯ ದರ್ಗಾ ಪ್ರದೇಶದ 40 ವರ್ಷದ ಮಹಿಳೆ ಜುಲೈ 8ರಂದು ಆಸ್ಪತ್ರೆಗೆ ದಾಖಲಾಗಿ 9ರಂದು ನಿಧನ ಹೊಂದಿದ್ದಾರೆ.

ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯಿಂದ ನಗರದ ಆಳಂದ ರಸ್ತೆ ಪ್ರದೇಶದ 65 ವರ್ಷದ ವೃದ್ಧೆ ಜುಲೈ 26ರಂದು ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.

ADVERTISEMENT

ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ, ಅಧಿಕ ರಕ್ತದೊತ್ತಡ ಹಾಗೂ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಕಲಬುರ್ಗಿಯ ಸಮತಾ ಕಾಲೊನಿಯ 65 ವರ್ಷದ ವೃದ್ಧ ಜುಲೈ 26ರಂದು ಆಸ್ಪತ್ರೆಗೆ ದಾಖಲಾಗಿ 31ರಂದು ನಿಧನ ಹೊಂದಿದ್ದಾರೆ.

ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯಿಂದ ಸುಂದರ‌ ನಗರದ 36 ವರ್ಷದ ಪುರುಷ ಜುಲೈ 26ರಂದು ಆಸ್ಪತ್ರೆಗೆ ದಾಖಲಾಗಿ 30 ರಂದು ನಿಧನರಾಗಿದ್ದಾರೆ.

ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯೊಂದಿಗೆ ನಗರದ ಗುಬ್ಬಿ ಕಾಲೊನಿಯ 59 ವರ್ಷದ ಪುರುಷ ಜುಲೈ 30ರಂದು ಆಸ್ಪತ್ರೆಗೆ ದಾಖಲಾಗಿ ಅಂದೇ ನಿಧನ ಹೊಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.