ADVERTISEMENT

10,588 ಪಡಿತರ ಚೀಟಿ ವಿತರಣೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2025, 16:18 IST
Last Updated 21 ಮಾರ್ಚ್ 2025, 16:18 IST
ಬಿ.ಜಿ.ಪಾಟೀಲ
ಬಿ.ಜಿ.ಪಾಟೀಲ   

ಕಲಬುರಗಿ: ಪ್ರಸ್ತುತ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಲಬುರಗಿ ಜಿಲ್ಲೆಯಲ್ಲಿ 10,588 ಹಾಗೂ ಯಾದಗಿರಿ ಜಿಲ್ಲೆಯಲ್ಲಿ 5,038 ಆದ್ಯತಾ ಪಡಿತರ ಚೀಟಿಗಳನ್ನು ವಿತರಣೆ ಮಾಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್‌. ಮುನಿಯಪ್ಪ ತಿಳಿಸಿದರು.‌

ವಿಧಾನ ಪರಿಷತ್‌ನಲ್ಲಿ ಸದಸ್ಯ ಬಿ.ಜಿ.ಪಾಟೀಲ ಪ್ರಶ್ನೆಗೆ ಅವರು ಉತ್ತರಿಸಿದರು.

‘ಕೇಂದ್ರ ಸರ್ಕಾರದ ಆಹಾರ ಭದ್ರತಾ ಕಾಯ್ದೆಯಡಿ ರಾಜ್ಯದಲ್ಲಿ 4,50,59,460 ಫಲಾನುಭವಿಗಳಿಗೆ ಪಡಿತರ ವಿತರಿಸಲಾಗುತ್ತಿದೆ. ಅನರ್ಹರನ್ನು ಪತ್ತೆ ಹಚ್ಚುವ ಕಾರ್ಯ ನಿರಂತರವಾಗಿ ನಡೆಯುತ್ತಿದ್ದು, ಅನರ್ಹ ಪಡಿತರ ಚೀಟಿ ರದ್ದುಪಡಿಸಿದಲ್ಲಿ ಅಷ್ಟೇ ಪ್ರಮಾಣದ ಹೊಸ ಚೀಟಿಗಳನ್ನು ನೀಡಲು ಅವಕಾಶವಿರುತ್ತದೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.