ADVERTISEMENT

ಕಲಬುರ್ಗಿಯಲ್ಲಿ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2019, 1:09 IST
Last Updated 13 ಡಿಸೆಂಬರ್ 2019, 1:09 IST
   

ಕಲಬುರ್ಗಿ: ನಗರದಲ್ಲಿಬೆಳಿಗ್ಗೆ6ರಿಂದ ಸಂಜೆ 6ವರೆಗೆ ನಿಷೇಧಾಜ್ಞೆ ವಿಧಿಸಿ ಪೊಲೀಸ್ ಕಮಿಷನರ್ ಎಂ.ಎನ್. ನಾಗರಾಜ ಆದೇಶ ಹೊರಡಿಸಿದ್ದಾರೆ.

ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಮಸೂದೆಗೆ ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ 144 ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಶುಕ್ರವಾರ ಮುಸ್ಲಿಮರು ನಮಾಜ್ ಮಾಡುವುದರಿಂದ ಮಸೀದಿಗಳ ಸುತ್ತಮುತ್ತ ಹಾಗೂ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿಷೇಧಾಜ್ಞೆ ಅನ್ವಯವಾಗುವುದಿಲ್ಲ ಎಂದು ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಡಿ.ಕಿಶೋರಬಾಬು ತಿಳಿಸಿದ್ದಾರೆ.

ADVERTISEMENT

ಗುರುವಾರ ಪೌರತ್ವ ಕಾಯ್ದೆ ತಿದ್ದುಪಡಿ ‌ಮಸೂದೆ ವಿರೋಧಿಸಿ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ‌ನಡೆಸಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.