ಕಲಬುರ್ಗಿ: ನಗರದ ವಿವಿಧೆಡೆ ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿ ₹ 8.5 ಲಕ್ಷ ಮೌಲ್ಯದ 16 ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ.
ನಗರದ ಗುಬ್ಬಿ ಕಾಲೊನಿಯ ಮಲ್ಲಿಕಾರ್ಜುನ ಬಸವರಾಜ ಕೋರಿ (21) ಹಾಗೂ ಬೀದರ್ ಜಿಲ್ಲೆ ಹುಮನಾಬಾದ್ ತಾಲ್ಲೂಕಿನ ದುಮ್ಮನಸೂರ ಗ್ರಾಮದ ನಿವಾಸಿ ಪ್ರಸಾದ್ ಶಿವಕುಮಾರ ಬಿದನೂರ (22) ಬಂಧಿತ ಆರೋಪಿಗಳು. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿ ಸಿದ್ದು ಪೂಜಾರಿ ತಲೆ ಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಿದ್ದರಾಮೇಶ್ವರ ಗಡೇದ ಹಾಗೂ ಪೊಲೀಸ್ ಕಾನ್‌ಸ್ಟೆಬಲ್‌ಗಳಾದ ನಜಮೊದ್ದೀನ್, ಅಂಬಾದಾಸ, ಶಿವಾನಂದ, ಬೊಗೇಶ, ಮೊಹಸಿನ್ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.