ADVERTISEMENT

ಟಿಇಟಿ ನಾಳೆ: 19 ಸಾವಿರ ಅಭ್ಯರ್ಥಿಗಳ ನೋಂದಣಿ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 14:33 IST
Last Updated 2 ಅಕ್ಟೋಬರ್ 2020, 14:33 IST
ಎಸ್‌.ಪಿ.ಬಾಡಗಂಡಿ
ಎಸ್‌.ಪಿ.ಬಾಡಗಂಡಿ   

ಕಲಬುರ್ಗಿ:ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ಅ.4ರಂದು ಭಾನುವಾರ ನಗರದ 47 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಒಟ್ಟಾರೆ 19,160 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಅಂದು ಪತ್ರಿಕೆ-1 ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ 16 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 5,302 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಪತ್ರಿಕೆ-2 ಮಧ್ಯಾಹ್ನ 2 ರಿಂದ ಸಂಜೆ 4.30 ಗಂಟೆಯವರೆಗೆ 47 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 13,858 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್‌.ಪಿ.ಬಾಡಗಂಡಿ ತಿಳಿಸಿದ್ದಾರೆ.

ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದ ವಿಳಾಸ ಹಾಗೂ ಇನ್ನಿತರ ಮಾಹಿತಿಯನ್ನು ಮುಂಚೆಯೇ ತಿಳಿದುಕೊಂಡು ಪರೀಕ್ಷಾ ದಿನದಂದು ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚೆಯೇ ಹಾಜರಾಗಬೇಕು ಎಂದು ಅವರು ತಿಳಿಸಿದ್ದಾರೆ.

ADVERTISEMENT

ಕೊರೊನಾ ಕಾರಣ ಮುನ್ನೆಚ್ಚರಿಕೆಕ್ರಮವಾಗಿ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿಯೇ ಪರೀಕ್ಷೆಗೆ ಹಾಜರಾಗಬೇಕು. ಕುಡಿಯುವ ನೀರನ್ನು ತಾವೇ ತೆಗೆದುಕೊಂಡು ಬರಬೇಕು. ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವಾಗ ಹಾಗೂ ಪರೀಕ್ಷಾ ಕೇಂದ್ರದಿಂದ ನಿರ್ಗಮಿಸುವಾಗ ಕಟ್ಟುನಿಟ್ಟಾಗಿ ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲುಪ್ರತಿ ಪರೀಕ್ಷಾ ಕೇಂದ್ರಕ್ಕೆ ತಲಾ ಇಬ್ಬರಂತೆ ಆರೋಗ್ಯ ಸಹಾಯಕರನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮೊಬೈಲ್ ನಿಷೇಧ: ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಎಲೆಕ್ಟ್ರಾನಿಕ್ಸ್ ವಸ್ತುಗಳು ಹಾಗೂ ಮೊಬೈಲ್ ಫೋನ್‍ ತರುವುದನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗುವ ಸಂದರ್ಭದಲ್ಲಿ ಪ್ರವೇಶ ಪತ್ರದ ಜೊತೆಗೆ ಆಧಾರ್‌ ಕಾರ್ಡ್ ಹಾಗೂ ಎರಡು ಪಾಸ್‍ಪೋರ್ಟ್ ಅಳತೆಯ ಭಾವಚಿತ್ರಗಳನ್ನು ತರಬೇಕು. ಪ್ರವೇಶ ಪತ್ರದಲ್ಲಿ ನೀಡಲಾಗಿರುವ ಎಲ್ಲಾ ಶರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.