ADVERTISEMENT

2 ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2014, 9:59 IST
Last Updated 21 ಮಾರ್ಚ್ 2014, 9:59 IST

ಗುಲ್ಬರ್ಗ: ಗುಲ್ಬರ್ಗ ಲೋಕಸಭಾ ಕ್ಷೇತ್ರಕ್ಕೆ ಏ. ೧೭ರಂದು ನಡೆಯಲಿರುವ ಚುನಾವಣೆಗಾಗಿ ನಾಮಪತ್ರ ಸಲ್ಲಿಸುವ ಎರಡನೆಯ ದಿನವಾದ ಗುರುವಾರ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರು ಒಟ್ಟು ನಾಲ್ಕು ನಾಮಪತ್ರ ಸಲ್ಲಿಸಿದರು.

ಇದುವರೆಗೆ ಇಬ್ಬರು ಅಭ್ಯರ್ಥಿಗಳು ಐದು ನಾಮಪತ್ರ ಗಳನ್ನು ಸಲ್ಲಿಸಿದಂತಾಗಿದೆ ಎಂದು ಚುನಾವಣಾಧಿಕಾರಿ ಡಾ.ಎನ್.ವಿ.ಪ್ರಸಾದ್ ತಿಳಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಮಾ. ೨೬ (ಬುಧವಾರ) ಕೊನೆಯ ದಿನವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.