ADVERTISEMENT

ರಾಮಮಂದಿರ ನಿರ್ಮಾಣಕ್ಕೆ ₹25 ಲಕ್ಷ ದೇಣಿಗೆ

​ಪ್ರಜಾವಾಣಿ ವಾರ್ತೆ
Published 16 ಜನವರಿ 2021, 1:27 IST
Last Updated 16 ಜನವರಿ 2021, 1:27 IST
ಡಾ.ಶರಣಬಸವಪ್ಪ ಅಪ್ಪ
ಡಾ.ಶರಣಬಸವಪ್ಪ ಅಪ್ಪ   

ಕಲಬುರ್ಗಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶರಣಬಸವೇಶ್ವರ ಸಂಸ್ಥಾನದಿಂದ ₹ 25 ಲಕ್ಷ ದೇಣಿಗೆ ನೀಡುವುದಾಗಿ ಸಂಸ್ಥಾನದ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪ ತಿಳಿಸಿದರು.

ರಾಮ ಮಂದಿರ ನಿಧಿ ಸಮರ್ಪಣಾ ಕಾರ್ಯಕ್ರಮಕ್ಕೆ ನಗರದಲ್ಲಿ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, ‘ನಾಡಿನ ಜನ ಮಂದಿರ ನಿರ್ಮಾಣಕ್ಕಾಗಿ ಮುಕ್ತ ಮನಸ್ಸಿನಿಂದ ದೇಣಿಗೆ ನೀಡಬೇಕು’ ಎಂದರು.‌

‘ರಾಮ ಮಂದಿರ ಜನರ ಮಂದಿರವಾಗಬೇಕು ಎಂಬುದು ನಮ್ಮಬಯಕೆ. ಹಾಗಾಗಿ, ಜನರಿಂದ ದೇಣಿಗೆ ಸಂಗ್ರಹಿಸುತ್ತಿದ್ದೇವೆ. ರಾಜ್ಯದ 27,500 ಗ್ರಾಮಗಳ 90 ಲಕ್ಷ ಮನೆಗಳಿಗೆ ಭೇಟಿ ನೀಡುತ್ತೇವೆ. ಕನಿಷ್ಠ ₹ 10ರಿಂದ ಗರಿಷ್ಠ ಎಷ್ಟಾದರೂ ದೇಣಿಗೆ ನೀಡಬಹುದು’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕೃಷ್ಣ ಜೋಶಿ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.