ADVERTISEMENT

ಅಕ್ರಮ ಸಾಗಣೆ: 260 ಕ್ವಿಂಟಲ್ ಅಕ್ಕಿ ಜಪ್ತಿ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2021, 12:37 IST
Last Updated 13 ಅಕ್ಟೋಬರ್ 2021, 12:37 IST
ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ಚೀಲಗಳನ್ನು ವಶಕ್ಕೆ ಪಡೆದ ಜೇವರ್ಗಿ ಪೊಲೀಸರು ಅವುಗಳ ತೂಕ ಮಾಡಿದರು
ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ಚೀಲಗಳನ್ನು ವಶಕ್ಕೆ ಪಡೆದ ಜೇವರ್ಗಿ ಪೊಲೀಸರು ಅವುಗಳ ತೂಕ ಮಾಡಿದರು   

ಜೇವರ್ಗಿ (ಕಲಬುರಗಿ ಜಿಲ್ಲೆ): ಪಡಿತರ ಅಕ್ಕಿಯನ್ನು ಅಕ್ರಮವಾಗಿ ನೆರೆಯ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಜಾಲ ಭೇದಿಸಿರುವ ಜೇವರ್ಗಿ ಪೊಲೀಸರು ಒಬ್ಬನನ್ನು ಬಂಧಿಸಿ, ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಯಾದಗಿರಿ ಜಿಲ್ಲೆಯ ಶಹಾಪೂರ ತಾಲ್ಲೂಕಿನ ಗೋಗಿಯಿಂದ ಅಕ್ಕಿಯನ್ನುಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಮಾಹಿತಿ ಪಡೆದ ಪೊಲೀಸರು ತಾಲ್ಲೂಕಿನ ಬೀದರ್–ಬೆಂಗಳೂರು ರಾಜ್ಯ ಹೆದ್ದಾರಿಯ ಚಿಗರಳ್ಳಿ ಕ್ರಾಸ್ ಬಳಿ ವಾಹನ ತಡೆದರು. ಲಾರಿಯಲ್ಲಿ ಸುಮಾರು 260 ಕ್ವಿಂಟಲ್ ಅಕ್ಕಿ ಇತ್ತು. ಚಾಲಕ ಪರಾರಿ ಆಗಿದ್ದು, ಕ್ಲೀನರ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೇವರ್ಗಿ ಪಿಎಸ್‌ಐ ಸಂಗಮೇಶ ಅಂಗಡಿ, ಆಹಾರ ಇಲಾಖೆ ಶಿರಸ್ತೇದಾರ ಡಿ.ಬಿ.ಪಾಟೀಲ ಇದ್ದರು. ಕಂದಾಯ ಇಲಾಖೆಯ ದೌಲತರಾಯ ಪಾಟೀಲ ದೂರು ನೀಡಿದ್ದು, ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.