ADVERTISEMENT

ದ್ವಿತೀಯ ಪಿಯುಸಿ ಪರೀಕ್ಷೆ: ಕಲಬುರಗಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2026, 8:08 IST
Last Updated 14 ಫೆಬ್ರುವರಿ 2026, 8:08 IST
<div class="paragraphs"><p>ಪರೀಕ್ಷಾ ಕೊಠಡಿ (ಪ್ರಾತಿನಿಧಿಕ ಚಿತ್ರ)</p></div>

ಪರೀಕ್ಷಾ ಕೊಠಡಿ (ಪ್ರಾತಿನಿಧಿಕ ಚಿತ್ರ)

   

ಕಲಬುರಗಿ: ಜಿಲ್ಲೆಯಾದ್ಯಂತ ಫೆ.28ರಿಂದ ಮಾರ್ಚ್‌ 17ರವರೆಗೆ ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-1 ಜರುಗಲಿದ್ದು, ಪರೀಕ್ಷೆ ಶಾಂತಿಯುತವಾಗಿ ನಡೆಯಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್‌ ಪ್ರದೆಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್‌ ಆದೇಶ ಹೊರಡಿಸಿದ್ದಾರೆ.

ಕಲಬುರಗಿ ನಗರದಲ್ಲಿ 25, ಕಮಲಾಪುರ-2, ಜೇವರ್ಗಿ-4, ಆಳಂದ-5, ಅಫಜಲಪುರ-4, ಕಾಳಗಿ-1, ಚಿಂಚೋಳಿ-3, ಚಿತ್ತಾಪುರ-2, ಶಹಾಬಾದ್‌-3 ಹಾಗೂ ಸೇಡಂ-2 ಸೇರಿ ಒಟ್ಟಾರೆ 51 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಕೇಂದ್ರಗಳ 200 ಮೀಟರ್ ಸುತ್ತಲಿನ ಪ್ರದೇಶದಲ್ಲಿ ಬರುವ ಎಲ್ಲಾ ಜೆರಾಕ್ಸ್ ಅಂಗಡಿಗಳು, ಪುಸ್ತಕ ಅಂಗಡಿಗಳು ಮತ್ತು ಕಂಪ್ಯೂಟರ್/ ಸೈಬರ್ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ.

ADVERTISEMENT

ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಸಿಬ್ಬಂದಿ ವರ್ಗದವರು ಹೊರತುಪಡಿಸಿ ಬೇರೆ ವ್ಯಕ್ತಿಗಳು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್‌ ಪ್ರದೇಶದಲ್ಲಿ ಮೊಬೈಲ್, ಪೇಜರ್, ಬ್ಲೂಟೂತ್‌, ವೈರ್‌ಲೆಸ್‌ ಸೆಟ್‌ ಹಾಗೂ ಇತ್ಯಾದಿ ಎಲೆಕ್ಟ್ರಾನಿಕ್‌ ವಸ್ತುಗಳನ್ನು ಉಪಯೋಗಿಸುವುದನ್ನು ಸಹ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.