ADVERTISEMENT

ವೀರ್, ಉಜನಿ ಜಲಾಶಯಗಳಿಂದ ಭೀಮಾ ನದಿಗೆ 70 ಸಾವಿರಕ್ಕೂ ಹೆಚ್ಚು ಕ್ಯುಸೆಕ್ ನೀರು

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2022, 11:36 IST
Last Updated 13 ಆಗಸ್ಟ್ 2022, 11:36 IST
   

ಕಲಬುರಗಿ: ಮಹಾರಾಷ್ಟ್ರದ ವೀರ್‌ ಮತ್ತು ಉಜನಿ ಜಲಾಶಯದಿಂದ ಭೀಮಾ‌ ನದಿಗೆ 70 ಸಾವಿರಕ್ಕೂ ಹೆಚ್ಚು ಕ್ಯುಸೆಕ್ ನೀರನ್ನು ಭೀಮಾ ನದಿಗೆ ಶನಿವಾರ ಹರಿಬಿಟ್ಟಿದ್ದು, ಯಾವುದೇ ಸಮಯದಲ್ಲಿ ಜಿಲ್ಲೆಯ ನದಿಗೆ ಬರುವ ಸಾಧ್ಯತೆ ಇದೆ. ಹೀಗಾಗಿ ಭೀಮಾ ನದಿ ದಂಡೆ‌ ಮತ್ತು ಸನ್ನತಿ ಬ್ರಿಡ್ಜ್ ಕಂ ಬ್ಯಾರೇಜ್ ಕಡೆ ಸಾರ್ವಜನಿಕರು ಹೋಗದಂತೆ ಹಾಗೂ ಜಾನುವಾರುಗಳನ್ನು ಬಿಡದಂತೆ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಮನವಿ ಮಾಡಿದ್ದಾರೆ.

ಜಲಾಶಯದಿಂದ ಈ ಪ್ರಮಾಣದ ನೀರು ಬಿಡುಗಡೆಯಿಂದ ಸದ್ಯಕ್ಕೆ ಭೀಮಾ ನದಿ ದಂಡೆಯ ಗ್ರಾಮಗಳಲ್ಲಿ ಯಾವುದೇ ಪ್ರವಾಹ ಉಂಟಾಗುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಜಿಲ್ಲಾಡಳಿತ, ಮುಂಜಾಗ್ರತಾ ಕ್ರಮವಾಗಿ ಅಫಜಲಪೂರ, ಜೇವರ್ಗಿ, ಚಿತ್ತಾಪುರ ಹಾಗೂ ಕಲಬುರಗಿ ತಾಲ್ಲೂಕಿನ ಭೀಮಾ ನದಿ ದಂಡೆಗೆ ಹೋಗದಂತೆ ಮನವಿ ಮಾಡಿದೆ.

ಪ್ರವಾಹದಿಂದ ನದಿ ದಂಡೆಯ ಗ್ರಾಮಸ್ಥರಿಗೆ ಏನಾದರೂ ಸಮಸ್ಯೆ ಕಂಡು ಬಂದಲ್ಲಿ ತುರ್ತಾಗಿ ಸಹಾಯವಾಣಿ ಸಂಖ್ಯೆ 1077 ಹಾಗೂ ದೂ.ಸಂ. 08472-278677ಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.